Get Mystery Box with random crypto!

ಪೋಲೆಂಡ್‌ನ ಇಗಾ ಸ್ವಿಯಾಟೆಕ್‌ ಅವರು ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಂ | ⭐ಜಾಗೃತ್ ಕರ್ನಾಟಕ⭐

ಪೋಲೆಂಡ್‌ನ ಇಗಾ ಸ್ವಿಯಾಟೆಕ್‌ ಅವರು ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಂ ಟೆನಿಸ್‌ ಟೂರ್ನಿಯ ಮಹಿಳೆಯರ ಸಿಂಗಲ್ಸ್‌ ವಿಭಾಗದ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ರೋಲ್ಯಾಂಡ್‌ ಗ್ಯಾರೋಸ್‌ನ ಫಿಲಿಪ್‌ ಚಾಟ್ರಿಯರ್‌ ಕೋರ್ಟ್‌ನಲ್ಲಿ ಶನಿವಾರ ನಡೆದ ಫೈನಲ್‌ನಲ್ಲಿ ಸ್ವೆಟೆಕ್‌ 6–1, 6–3 ರಲ್ಲಿ ಅಮೆರಿಕದ ಕೊಕೊ ಗಫ್ ವಿರುದ್ಧ ನಿರಾಯಾಸ ಗೆಲುವು ಸಾಧಿಸಿದರು.

ವಿಶ್ವದ ಅಗ್ರ ರ‍್ಯಾಂಕಿಂಗ್‌ನ ಆಟಗಾರ್ತಿಗೆ ಒಲಿದ ಎರಡನೇ ಫ್ರೆಂಚ್‌ ಓಪನ್‌ ಪ್ರಶಸ್ತಿ ಇದು. 2020 ರಲ್ಲೂ ಅವರು ಇಲ್ಲಿ ಚಾಂಪಿಯನ್‌ ಆಗಿದ್ದರು.