Get Mystery Box with random crypto!

ವಿಶ್ವ ಯೋಗ ದಿನ-June 21 ಹಿನ್ನೆಲೆ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ | ⭐ಜಾಗೃತ್ ಕರ್ನಾಟಕ⭐

ವಿಶ್ವ ಯೋಗ ದಿನ-June 21

ಹಿನ್ನೆಲೆ:

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕರಡು ಪ್ರಸ್ತಾವನೆಯನ್ನು 2014 ಡಿಸೆಂಬರ್ ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ಖಾಯಂ ಪ್ರತನಿಧಿಯಾಗಿರುವ ಅಶೋಕ್ ಕುಮಾರ್ ಮಂಡಿಸಿದ್ದರು. ವಿಶ್ವಸಂಸ್ಥೆಗೆ ಇದು ಐತಿಹಾಸಿಕ ಕ್ಷಣವಾಗಿದ್ದು, ಅದರ ಸದಸ್ಯ ರಾಷ್ಟ್ರಗಳು ಅಭೂತಪೂರ್ವ ಬೆಂಬಲ ಸೂಚಿಸಿದ್ದರು. ವಿಶ್ವ ಸಂಸ್ಥೆಯ 193 ರಾಷ್ಟ್ರಗಳ ಪೈಕಿ 177 ದೇಶಗಳು ಅನುಮೋದನೆಯನ್ನು ನೀಡಿದ್ದವು.

- 2015, ಜೂನ್ 21ನೇ ತಾರೀಖಿನಂದು ಮೊದಲ ಅಂತಾರಾಷ್ಟ್ರೀಯ ಯೋಗ ದಿನವನ್ನು ವಿಶ್ವಾದ್ಯಂತ ಆಚರಿಸಲಾಯಿತು.

ಜೂನ್ 21ರ ವಿಶೇಷ:

ಜೂನ್.21 ಉತ್ತರ ಗೋಳಾರ್ಧದಲ್ಲಿ ದೀರ್ಘಕಾಲ ಹಗಲು ಹೊಂದಿರುವ ದಿನ, ವರ್ಷದಲ್ಲಿ ಉತ್ತರ ಗೋಳಾರ್ಧದ ಅತಿ ಉದ್ದದ ಹಾಗೂ ದಕ್ಷಿಣ ಗೋಳಾರ್ಧದ ಅತಿ ಚಿಕ್ಕ ದಿನವನ್ನು ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಆಯ್ಕೆ ಮಾಡಲಾಗಿದೆ.
ಈ ದಿನವನ್ನು ಬೇಸಿಗೆ ಅಯನ ಸಂಕ್ರಾಂತಿ ದಿನವೆಂದು (ವರ್ಷದಲ್ಲಿನ ಅತ್ಯಂತ ಹೆಚ್ಚು ಹಗಲುಳ್ಳ ದಿನ) ಕರೆಯಲಾಗುತ್ತದೆ.

ಧ್ಯೇಯ ವಾಕ್ಯ 2022:

Yoga for Humanity
(“ಮಾನವಿಯತೆಗಾಗಿ ಯೋಗ”)


ಯೋಗದ ಅಂಶಗಳ ಬಗ್ಗೆ ಯಾವ ವೇದದಲ್ಲಿ ಉಲ್ಲೇಖಿಸಲಾಗಿದೆ?
—ಋಗ್ವೇದ.

Join ಜಾಗೃತ್ ಕರ್ನಾಟಕ

━━━━━━━✧❂✧━━━━━━