Get Mystery Box with random crypto!

ಮೇ 16ರಂದು ರಾಜ್ಯದಲ್ಲಿ ಮಹಾ ಮಳೆ, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಬೆ | Kannada News Daily

ಮೇ 16ರಂದು ರಾಜ್ಯದಲ್ಲಿ ಮಹಾ ಮಳೆ, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು, ಮೇ 12: ರಾಜ್ಯದಲ್ಲಿ ಮೇ 16 ರಂದು ರಾಜ್ಯದಲ್ಲಿ ಭಾರಿ ಮಳೆ ಸುರಿಯಲಿದ್ದು, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚು ಮಳೆ ಸುರಿಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಮೇ 16ರಂದು ಚಂಡಮಾರುತ ಬಂದು ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಕರ್ನಾಟಕ, ಗೋವಾ, ಮಹಾರಾಷ್ಟ್ರ, ಕೇರಳದಲ್ಲಿ ಮಳೆಯಾಗಲಿದೆ. ಮೇ 15ರವರೆಗೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಇನ್ನುಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ತುಮಕೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ.

View full article