Get Mystery Box with random crypto!

ಶಿವಮೊಗ್ಗ : ನಾಳೆಯಿಂದ ಪಾಲಿಕೆ ವ್ಯಾಪ್ತಿಯಲ್ಲಿರುವ 'ಇಂದಿರಾ ಕ್ಯಾಂಟೀನ್' | Kannada News Daily

ಶಿವಮೊಗ್ಗ : ನಾಳೆಯಿಂದ ಪಾಲಿಕೆ ವ್ಯಾಪ್ತಿಯಲ್ಲಿರುವ 'ಇಂದಿರಾ ಕ್ಯಾಂಟೀನ್'ಗಳಲ್ಲಿ 'ಉಚಿತ ಊಟ' ಲಭ್ಯ

ಶಿವಮೊಗ್ಗ : ಲಾಕ್ ಡೌನ್ ಸಂದರ್ಭದಲ್ಲಿ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಪೌರಾಡಳಿತ ಇಲಾಖೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಕೂಲಿ ಕಾರ್ಮಿಕರು,ವಲಸಿಗರು ಮತ್ತು ಇತರೇ ದುರ್ಬಲ ವರ್ಗದವರಿಗೆ ಉಚಿತ ಊಟದ ವ್ಯವಸ್ಥೆ ಮಾಡುವಂತೆ ಸೂಚಿಸಿತ್ತು. ಈ ಸೂಚನೆ ಹಿನ್ನಲೆಯಲ್ಲಿ ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿರುವ ಇಂದಿರಾ ಕ್ಯಾಂಟಿನ್ ಗಳಲ್ಲಿ ನಾಳೆಯಿಂದ ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟಗಳನ್ನು ಉಚಿತವಾಗಿ ನೀಡಲಿದೆ. ಈ ಕುರಿತಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆ ಹೊರಡಿಸಿದ್ದು, ಸರ್ಕಾರವು ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ತಡೆಗಟ್ಟಲು ಹಾಗೂ ಪ್ರಸರಣ ಸರಪಳಿಯನ್ನು ತುಂಡರಿಸಲು ರಾಜ್ಯದಲ್ಲಿ ದಿನಾಂಕ 10-05-2021ರಿಂದ 24-05-2021ರವರೆಗೆ ಕೋವಿಡ್-19 ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿ ಆದೇಶಿಸಿರುತ್ತಾರೆ.

View full article