Get Mystery Box with random crypto!

ಕೋವಿಡ್‌ನಿಂದ ತಂದೆ ತಾಯಿ ಕಳೆದುಕೊಂಡ ಮಕ್ಕಳಿಗೆ ಸರ್ಕಾರದಿಂದ ಉಚಿತ ಶಿಕ್ಷ | Kannada News Daily

ಕೋವಿಡ್‌ನಿಂದ ತಂದೆ ತಾಯಿ ಕಳೆದುಕೊಂಡ ಮಕ್ಕಳಿಗೆ ಸರ್ಕಾರದಿಂದ ಉಚಿತ ಶಿಕ್ಷಣ

ಕೋವಿಡ್‌ನಿಂದಾಗಿ ದೇಶಾದ್ಯಂತ ಸಾವಿರಾರು ಮಕ್ಕಳು ಅನಾಥರಾಗಿದ್ದಾರೆ. ಅಪ್ಪ-ಅಮ್ಮ ಇಬ್ಬರನ್ನೂ ಕಳೆದುಕೊಂಡ ಮಕ್ಕಳ ಮುಂದಿನ ಭವಿಷ್ಯದ ಚಿಂತೆ ಎಲ್ಲರನ್ನ ಕಾಡುತ್ತಿದೆ. ಈ ನಿಟ್ಟಿನಲ್ಲಿ ಮೊದಲೇ ಧ್ವನಿಯೆತ್ತಿದ್ದ ಬಾಲಿವುಡ್ ನಟ ಸೋನು ಸೂದ್, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅಂಥ ಮಕ್ಕಳ ಕೈಹಿಡಿಯುವಂತೆ ಮನವಿ ಮಾಡಿಕೊಂಡಿದ್ರು. ಕೋವಿಡ್ ಸೋಂಕಿನಿಂದಾಗಿ ಹಲವು ಕುಟುಂಬಗಳು ಬಾಧಿತವಾಗಿವೆ. ಮಕ್ಕಳು ತಂದೆ-ತಾಯಿ ಅಥವಾ ಪೋಷಕರನ್ನ ಕಳೆದುಕೊಂಡು ತಬ್ಬಲಿಗಳಾಗಿದ್ದಾರೆ. ತಮ್ಮನ್ನ ಆರೈಕೆ ಮಾಡುವವರೇ ಮೃತಪಟ್ಟಿದ್ದರಿಂದ ಆ ಮಕ್ಕಳು ಒಬ್ಬಂಟಿಗಳಾಗಿದ್ದಾರೆ. ಸಂಕಷ್ಟದಲ್ಲಿರುವ ಅಂಥ ಮಕ್ಕಳ ಬಗ್ಗೆ ಸರ್ಕಾರಗಳೇ ಕಾಳಜಿ ವಹಿಸಬೇಕು ಎಂದು ಕಳೆದ ವಾರವಷ್ಟೇ ಸೋನು ಸೂದ್ ಅಭಿಪ್ರಾಯ ವ್ಯಕ್ತಪಡಿಸಿದ್ರು. ವಾಕ್ ಇನ್ ಆಕ್ಸಿಜನ್ ಕೆಫೆ ಸ್ಥಾಪಿಸಿದ ದಿಲ್ಲಿಯ ಖಾಸಗಿ ಶಾಲೆ ಇದರ ಬೆನ್ನಲ್ಲೇ ಇದೀಗ ಒಂದೊಂದೇ ರಾಜ್ಯಗಳು ನೊಂದ ಮಕ್ಕಳ ಕಣ್ಣೀರೊರೆಸಲು ಮುಂದೆ ಬರ್ತಿವೆ.ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

View full article