Get Mystery Box with random crypto!

ಗಂಗಾವತಿ: ಐದು ದಿನಗಳ ಲಾಕ್ ಡೌನ್ ಘೋಷಣೆ ಹಿನ್ನೆಲೆ, ಅಗತ್ಯ ವಸ್ತುಗಳ ಖರೀ | Kannada News Daily

ಗಂಗಾವತಿ: ಐದು ದಿನಗಳ ಲಾಕ್ ಡೌನ್ ಘೋಷಣೆ ಹಿನ್ನೆಲೆ, ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ

ಗಂಗಾವತಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಐದು ದಿನಗಳ ಕಠಿಣ ಲಾಕ್ ಡೌನ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಗಂಗಾವತಿಯಲ್ಲಿ ರವಿವಾರ ಅಗತ್ಯವಸ್ತುಗಳ ಖರೀದಿಗಾಗಿ ಜನರು ಮುಗಿಬಿದ್ದಿದ್ದಾರೆ. ತರಕಾರಿ, ಮಾಂಸ ಹಾಗೂ ಬಟ್ಟೆ ಕಿರಾಣಿ ಸಾಮಾನುಗಳನ್ನು ಖರೀದಿಸಲು ನಗರ ಹಾಗೂ ಗ್ರಾಮೀಣ ಭಾಗದಿಂದ ಜನರು ಬೈಕ್ ಟ್ರ್ಯಾಕ್ಟರ್ ಹಾಗೂ ಆಟೋಗಳಲ್ಲಿ ಆಗಮಿಸಿದ್ದರು. ಪೊಲೀಸರು ಸಾಮಾಜಿಕ ಅಂತರ ಕಾಪಾಡುವಂತೆ ಮತ್ತು ಮಾಸ್ಕ್ ಧರಿಸುವಂತೆ ಮನವಿ ಮಾಡಿದರೂ ಜನರು ಕೇಳಿಸಿಕೊಳ್ಳುವ ವ್ಯವದಾನದಲ್ಲಿರಲಿಲ್ಲ ಎಂದು ವರದಿಯಾಗಿದೆ. ತರಕಾರಿ, ಮಾಂಸದಂಗಡಿ, ಕಿರಾಣಿ ಮತ್ತು ಬಟ್ಟೆ ಅಂಗಡಿಗಳ ಮುಂದೆ ಜನಸ್ತೋಮವೇ ಕಂಡುಬಂದಿದೆ. ಡೇಲಿ ಮಾರ್ಕೆಟ್, ಮಹಾವೀರ ವೃತ್ತ ಹಾಗೂ ಓಎಸ್ ಬಿ ರೋಡ್ ನಲ್ಲಿರುವ ಬಟ್ಟೆ ಅಂಗಡಿಗಳಲ್ಲೂ ಜನರು ಮುಗಿಬಿದ್ದಿದ್ದರು.ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

View full article