Get Mystery Box with random crypto!

ಕೋವಿಡ್-19 ಬಿಕ್ಕಟ್ಟು: 11ಕ್ಕೂ ಹೆಚ್ಚು ದೇಶಗಳ ರಾಜತಾಂತ್ರಿಕರ ಜೊತೆ ಡಿಸ | Kannada News Daily

ಕೋವಿಡ್-19 ಬಿಕ್ಕಟ್ಟು: 11ಕ್ಕೂ ಹೆಚ್ಚು ದೇಶಗಳ ರಾಜತಾಂತ್ರಿಕರ ಜೊತೆ ಡಿಸಿಎಂ ಮಾತುಕತೆ

ಬೆಂಗಳೂರು, ಮೇ 17: ಕೋವಿಡ್-19 ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸುವ ಹಾಗೂ ಪರಸ್ಪರ, ಸಹಕಾರ, ನೆರವು ಇತ್ಯಾದಿಗಳ ಬಗ್ಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರು ಸೋಮವಾರ ಜಾಗತಿಕ ಆವಿಷ್ಕಾರ ಮೈತ್ರಿಕೂಟ (GIA) ದೇಶಗಳ ರಾಜತಾಂತ್ರಿಕರ ಜತೆ ಮಹತ್ವದ ಮಾತುಕತೆ ನಡೆಸಿದರು. ಡಿಸಿಎಂ ಅಧ್ಯಕ್ಷತೆಯಲ್ಲಿ ನಡೆದ ಈ ವರ್ಚುಯಲ್ ಸಭೆಯಲ್ಲಿ ಕೋವಿಡ್ ಎದುರಿಸಲು ಕೈಗೊಳ್ಳಲಾಗಿರುವ ಕಾರ್ಯತಂತ್ರ, ವ್ಯಾಕ್ಸಿನೇಷನ್, ವೈದ್ಯಕೀಯ ಸೌಲಭ್ಯ, ಪರಸ್ಪರ ಸಹಕಾರ ಇತ್ಯಾದಿಗಳ ಬಗ್ಗೆ ಚ‌ರ್ಚೆ ನಡೆಸಲಾಯಿತು. ಅಮೆರಿಕ, ಕೆನಡಾ, ನೆದರ್‌ಲ್ಯಾಂಡ್ಸ್, ಬ್ರಿಟನ್‌, ಜರ್ಮನಿ, ಇಸ್ರೇಲ್‌, ಆಸ್ಟ್ರೇಲಿಯಾ, ಡೆನ್ಮಾರ್ಕ್‌, ದಕ್ಷಿಣ ಕೊರಿಯಾ, ಸ್ವಿಡ್ಜರ್‌ಲೆಂಡ್, ಜಪಾನ್‌ ಮುಂತಾದ ದೇಶಗಳ ದಕ್ಷಿಣ ಭಾರತ್‌ ಕಾನ್ಸುಲೇಟ್ ಜನರಲ್‌ಗಳ ಜತೆ ಡಿಸಿಎಂ ಮಾತುಕತೆ ನಡೆಸಿದರು.ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

View full article