Get Mystery Box with random crypto!

BIG BREAKING NEWS : ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮ | Kannada News Daily

BIG BREAKING NEWS : ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಕ್ಕೆ ತಿದ್ದುಪಡಿ : ಏನೆಲ್ಲಾ ಬದಲಾವಣೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಕ್ಕೆ ಮತ್ತೆ ತಿದ್ದುಪಡಿ ತರಗಾಲಿದೆ. ಈವರೆಗೆ ತೃತೀಯ ಲಿಂಗದವರಿಗೂ ನೀಡಲಾಗದಿದ್ದಂತ ಉದ್ಯೋಗಾವಕಾಶದಲ್ಲಿನ ಮೀಸಲಾತಿಯನ್ನು, ಇದೀಗ ತಿದ್ದುಪಡಿ ಮಾಡುವ ಮೂಲಕ ನೀಡಲಾಗಿದೆ. ಇದಷ್ಟೇ ಅಲ್ಲದೇ ಹಲವು ಮತ್ತಷ್ಟು ನೇಮಕಾತಿ ವಿಧಾನದಲ್ಲಿ ಬದಲಾವಣೆ ಮಾಡಲಾಗಿದ್ದು, ಯಾವೆಲ್ಲಾ ಬದಲಾವಣೆ ಮಾಡಲಾಗಿದೆ ಎನ್ನುವ ಬಗ್ಗೆ ಮುಂದೆ ಓದಿ.. ಈ ಕುರಿತಂತೆ ವಿಶೇಷ ರಾಜ್ಯಪತ್ರವನ್ನು ಹೊರಡಿಸಿರುವಂತ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಸೇವಾ ನಿಮಯಗಳು-1)ರ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾ ವರದಯ್ಯ ಅವರು, ಕರ್ನಾಟಕ ಸರ್ಕಾರವು ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ಕ್ಕೆ ಮತ್ತಷ್ಟು ತಿದ್ದುಪಡಿ ಮಾಡುವ ಉದ್ದೇಶದಿಂದ ಈ ಕೆಳಗಿನ ನಿಯಮಗಳ ಕರಡನ್ನು ಸದರಿ ಅಧಿನಿಯಮದ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ, ಇದರಿಂದ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಲಾಗಿದೆ.

View full article