Get Mystery Box with random crypto!

ರಾಜ್ಯದಲ್ಲಿ ಕೊರೋನಾ ಸಾವಿನ ಕೇಕೆ : ಇಂದು 525 ಮಂದಿ ಬಲಿ, 30309 ಹೊಸ ಕೇ | Kannada News Daily

ರಾಜ್ಯದಲ್ಲಿ ಕೊರೋನಾ ಸಾವಿನ ಕೇಕೆ : ಇಂದು 525 ಮಂದಿ ಬಲಿ, 30309 ಹೊಸ ಕೇಸ್..!

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಮುಂದುವರೆದಿದ್ದು ಮಹಾಮಾರಿಗೆ ಇಂದು ರಾಜ್ಯದಲ್ಲಿ ಸಾವಿನ ಕೇಕೆ ಹಾಕಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಾದ್ಯಂತ 525 ಜೀವಗಳು ಬಲಿಯಾಗಿದ್ದು, ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 30309 ಹೊಸ ಕೇಸ್ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2272374 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 22838ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 8676 ಜನರಿಗೆ ಕೊರೋನಾ ತಗುಲಿದೆ, ನಗರದಲ್ಲಿ ಇಂದು 298 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 1073072 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ ಒಟ್ಟು 10020 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

View full article