Get Mystery Box with random crypto!

'ಸಹಕಾರಿ ಸಂಘ'ಗಳಿಂದ ಸಾಲಪಡೆದವರಿಗೆ ಬಿಗ್ ರಿಲೀಫ್ : ರಾಜ್ಯ ಸರ್ಕಾರದಿಂದ | Kannada News Daily

'ಸಹಕಾರಿ ಸಂಘ'ಗಳಿಂದ ಸಾಲಪಡೆದವರಿಗೆ ಬಿಗ್ ರಿಲೀಫ್ : ರಾಜ್ಯ ಸರ್ಕಾರದಿಂದ ಸಾಲ ಮರುಪಾವತಿಗೆ 3 ತಿಂಗಳು ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರದಿಂದ ಕೊರೋನಾ ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವಂತ ರಾಜ್ಯದ ಜನರಿಗೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ರೈತರಿಗೆ ಸಹಕಾರಿ ಸಂಘಗಳಿಂದ ಪಡೆದ ಸಾಲದ ಕಂತು ಪಾವತಿ ಮುಂದೂಡಿದ್ದರೇ, ಹೂ, ಹಣ್ಣು, ತರಕಾರಿ ಬೆಳೆಗಾರರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಅನ್ನು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅಲ್ಲದೇ ಸಹಕಾರ ಸಂಘಗಳ ಮೂಲಕ ಸಾಲ ಪಡೆದವರಿಗೆ 31-07-2021 ರವರೆಗೆ ವಿಸ್ತರಣೆ ಮಾಡಿದ್ದಾರೆ. ಈ ಮೂಲಕ ಸಹಕಾರಿ ಸಂಘಗಳಿಂದ ಸಾಲ ಪಡೆದವರಿಗೆ ಬಿಗ್ ರಿಲೀಫ್ ನೀಡಿದ್ದಾರೆ. ಈ ಕುರಿತಂತೆ ಸಚಿವರೊಂದಿಗೆ ಸಭೆ ನಡೆಸಿದ ಬಳಿಕ, ಸುದ್ದಿಗೋಷ್ಠಿ ನಡೆಸಿ ಇಂದು ಮಾತನಾಡಿದಂತ ಅವರು, ಕೋವಿಡ್ 19 ಸಾಂಕ್ರಾಮಿಕ 2ನೇ ಅಲೆಯ ತೀವ್ರತೆಯಿಂದಾಗಿ ಹೆಚ್ಚುತ್ತಿರುವಂತ ಸೋಂಕಿತರ ಸಂಖ್ಯೆ ನಿಯಂತ್ರಿಸುವ ಸಲುವಾಗಿ ಮೇ.24ರವರೆಗೆ ವಾಣಿಜ್ಯ ಮತ್ತು ಇತರೆ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸೋದು ಅನಿವಾರ್ಯವಾಗಿತ್ತು.

View full article