Get Mystery Box with random crypto!

'ಪ್ರಧಾನಿಗಳೇ.. ದಯಮಾಡಿ ಅಷ್ಟು ಕೆಳಮಟ್ಟಕ್ಕೆ ಇಳಿಯಬೇಡಿ'' ಹಾಸನ, ಮೇ 1 | Kannada News Daily

"ಪ್ರಧಾನಿಗಳೇ.. ದಯಮಾಡಿ ಅಷ್ಟು ಕೆಳಮಟ್ಟಕ್ಕೆ ಇಳಿಯಬೇಡಿ''

ಹಾಸನ, ಮೇ 19: ದಯಮಾಡಿ ಪ್ರಧಾನಮಂತ್ರಿಗಳು ಕೆಳಮಟ್ಟಕ್ಕೆ ಇಳಿಯಬಾರದು ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಚಿವ ಎಚ್.ಡಿ ರೇವಣ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ ರೇವಣ್ಣ, ಜಿಲ್ಲಾಧಿಕಾರಿಗಳೊಂದಿಗಿನ ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ಕಾನ್ಫರೆನ್ಸ್ ಬಗ್ಗೆ ಆಕ್ರೋಶ ಹೊರಹಾಕಿದರು. ಜಿಲ್ಲಾಧಿಕಾರಿಗಳನ್ನು ಕೂರಿಸಿಕೊಂಡು ಅವಮಾನ ಮಾಡಿದ್ದೀರಿ. ನೀವು ಯಾವ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದೀರಿ? ದಯಮಾಡಿ ಪ್ರಧಾನಿಗಳು ಕೆಳಮಟ್ಟಕ್ಕೆ ಇಳಿಯಬೇಡಿ. ಪ್ರಧಾನಿಗಳು ಎಲ್ಲ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಬೇಕಿತ್ತು. ಸಭೆ ಮಾಡಿ ಈ ರಾಜ್ಯದ ಬಗ್ಗೆ ಪ್ರಧಾನಿಗಳು ಏನು ತಿಳಿದುಕೊಂಡಿದ್ದಾರೆ ಎಂದು ರೇವಣ್ಣ ಖಾರವಾಗಿ ಪ್ರಶ್ನಿಸಿದರು. ಬಿಬಿಎಂಪಿ ವಿಶೇಷ ಅಧಿಕಾರಿ ಆ ಗೌರವ್ ಗುಪ್ತಾ ಅವರ ಜೊತೆ ಮಾತನಾಡಿದ್ದಾರೆ.

View full article