ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನ ವಿವಿಧೆಡೆ ಮಳೆ ಸಾಧ್ಯತೆ ಬೆಂಗಳೂರು, ಮೇ 20: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಳೆದ ಒಂದು ತಿಂಗಳಿಂದ ಆಗಾಗ ಮಳೆಯಾಗುತ್ತಿದೆ, ತೌಕ್ತೆ ಚಂಡಮಾರುತದಿಂದಾಗಿ ಒಂದೆರೆಡು ದಿನ ಹೆಚ್ಚಿನ ಮಳೆಯೇ ಸುರಿದಿದೆ. ತೌಕ್ತೆ ದುರ್ಬಲ: ಮೇ 23ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಮಲೆನಾಡಿನಲ್ಲಿ ಕೂಡ ಮೋಡಕವಿದ ವಾತಾವರಣ ಮುಂದುವರೆಯಲಿದೆ, ಸಂಜೆ ವೇಳೆಗೆ ಮಳೆಯಾಗಬಹುದೆಂಬ ನಿರೀಕ್ಷೆ ಇದೆ.
View full article