Get Mystery Box with random crypto!

ಸೋಂಕಿತರು, ಸಿಬ್ಬಂದಿಯ ನೋವಿಗೆ ಮಿಡಿದ ತರಳಬಾಳು ಮಠ; ವಿಕ್ಟೋರಿಯಾ ಆಸ್ಪತ್ | Kannada News Daily

ಸೋಂಕಿತರು, ಸಿಬ್ಬಂದಿಯ ನೋವಿಗೆ ಮಿಡಿದ ತರಳಬಾಳು ಮಠ; ವಿಕ್ಟೋರಿಯಾ ಆಸ್ಪತ್ರೆಗೆ ಆಹಾರ ಪೂರೈಕೆ

ಬೆಂಗಳೂರು: ಕರೊನಾ ಎರಡನೇ ಅಲೆ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚುತ್ತಿರುವುದನ್ನು ಕಂಡ ಜನರು ರೋಗದ ಭಯ, ಸಾವಿನ ಭೀತಿಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ ಇಂತಹ ಸಂದರ್ಭದಲ್ಲಿ ಸಾಮಾಜಿಕ ಸೇವೆಗೆ ಮುಂದಾಗಿರುವ ಸಿರಿಗೆರೆ ತರಳಬಾಳು ಬೃಹನ್ಮಠ ಕೋವಿಡ್ ಸೋಂಕಿತರಿಗೆ ಆತ್ಮ ಸ್ಥೈರ್ಯ ತುಂಬುವುದರ ಜತೆಗೆ ವಿವಿಧ ಸೇವೆಗಳಲ್ಲಿ ತೊಡಗಿಕೊಂಡಿದೆ. ಕರೊನಾದಿಂದ ಕಂಗೆಟ್ಟಿರುವ ಜನತೆಗೆ ಆಸರೆಯಾಗುವ ಮಾನವೀಯತೆಯ ನಿಟ್ಟಿನಲ್ಲಿ ತರಳಬಾಳು ಮಠ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಷ್ಟೇ ಅಲ್ಲದೇ ಅಂಗಸಂಸ್ಥೆಯಾದ ತರಳಬಾಳು ಕೇಂದ್ರದ ಮೂಲಕ ಬೆಂಗಳೂರು ನಗರದ ವಿಕ್ಟೋರಿಯಾ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂದಿ, ಕರೊನಾ ವಾರಿಯರ್ಸ್ ಗಳು, ಪರಿಚಾರಕರು ಹಾಗೂ ಕೋವಿಡ್ ಸೋಂಕಿತರ ಸಂಬಂಧಿಗಳಿಗೆ ಅವಶ್ಯಕವಾಗಿರುವ ಆಹಾರದ ಪೂರೈಕೆಯನ್ನು ಉಚಿತವಾಗಿ ಸಮರ್ಪಣೆ ಮಾಡಲಾಗುತ್ತಿದೆ.ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

View full article