Get Mystery Box with random crypto!

ರಾಜ್ಯದಲ್ಲಿಂದು ಕಿಲ್ಲರ್ ಕೊರೋನಾಗೆ 530 ಮಂದಿ ಬಲಿ, 26811 ಹೊಸ ಕೇಸ್..! | Kannada News Daily

ರಾಜ್ಯದಲ್ಲಿಂದು ಕಿಲ್ಲರ್ ಕೊರೋನಾಗೆ 530 ಮಂದಿ ಬಲಿ, 26811 ಹೊಸ ಕೇಸ್..!

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಮುಂದುವರೆದಿದ್ದು ಇಂದು ಕಿಲ್ಲರ್ ಕೊರೋನಾ ಮರಣಮೃದಂಗ ಬಾರಿಸಿದೆ. ರಾಜ್ಯದಾದ್ಯಂತ ಕಳೆದ 24 ಗಂಟೆಯಲ್ಲಿ 530 ಪ್ರಾಣ ಕಳೆದುಕೊಂಡಿದ್ದಾರೆ, ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 26811 ಹೊಸ ಕೇಸ್ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2499784ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 26929ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 6433 ಜನರಿಗೆ ಕೊರೋನಾ ತಗುಲಿದೆ, ನಗರದಲ್ಲಿ ಇಂದು 285 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 1137929 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ ಒಟ್ಟು 12148 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

View full article