Get Mystery Box with random crypto!

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತಿದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕು | Kannada News Daily

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತಿದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕೊಳ್ಳೇಗಾಲ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭಾನುವಾರ ವ್ಯಂಗ್ಯವಾಡಿದರು. ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳುವುದಕ್ಕಾಗಿ ಕಾಂಗ್ರೆಸ್ ಹಮ್ಮಿಕೊಂಡಿರುವ ಅಭಿಯಾನಕ್ಕೆ ಚಾಲನೆ ನೀಡಿ ಹಾಗೂ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಆಮ್ಲಜನಕ ದುರಂತದಲ್ಲಿ ಮೃತಪಟ್ಟ ಪಾಳ್ಯ ಗ್ರಾಮದ ವ್ಯಕ್ತಿಯ ಕುಟುಂಬಕ್ಕೆ ಕೆಪಿಸಿಸಿ ವತಿಯಿಂದ ₹1 ಲಕ್ಷ ನೆರವು ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. 'ಚಾಮರಾಜನಗರದಲ್ಲಿ ನಡೆದ ಆಮ್ಲಜನಕ ದುರಂತ ಸರ್ಕಾರ ಮಾಡಿರುವ ಕೊಲೆ. ಈ ದುರಂತಕ್ಕೆ ಕಾರಣ ಇಲ್ಲಿನ ಅಧಿಕಾರಿಗಳು. ಘಟನೆ ನಡೆದು 57 ದಿನ ಕಳೆದರೂ ಯಾವ ಅಧಿಕಾರಿಗಳ ಮೇಲೂ ಇನ್ನೂ ಕ್ರಮಕೈಗೊಂಡಿಲ್ಲ. ಈ ಸರ್ಕಾರ ಅಧಿಕಾರಿಗಳ ಪರ ನಿಂತಿದೆಯೇ ವಿನಾ ಜನರ ಪರ ನಿಂತಿಲ್ಲ.

View full article