Get Mystery Box with random crypto!

Kannada News Daily

टेलीग्राम चैनल का लोगो kannadanewsdaily — Kannada News Daily K
टेलीग्राम चैनल का लोगो kannadanewsdaily — Kannada News Daily
चैनल का पता: @kannadanewsdaily
श्रेणियाँ: समाचार
भाषा: हिंदी
ग्राहकों: 209

Ratings & Reviews

2.50

2 reviews

Reviews can be left only by registered users. All reviews are moderated by admins.

5 stars

0

4 stars

0

3 stars

1

2 stars

1

1 stars

0


नवीनतम संदेश 33

2021-05-30 10:18:08
ಜೈಲಿನಲ್ಲಿರುವ ಚೋಕ್ಸಿ ಚಿತ್ರ ಬಿಡುಗಡೆ, ಭಾರತಕ್ಕೆ ಕಳಿಸಲು ಮನವಿ

ನವದೆಹಲಿ, ಮೇ 30: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ, ಭಾರತದ ನಂ.1 ಉದ್ದೇಶಪೂರ್ವಕ ಸುಸ್ತಿದಾರ, ದೇಶಭ್ರಷ್ಟ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಸದ್ಯ ಡೊಮಿನಿಕಾದಲ್ಲಿ ಜೈಲಿನಲ್ಲಿರುವ ಚಿತ್ರ ಬಿಡುಗಡೆಯಾಗಿದೆ. ಇದಾದ ಬಳಿಕ, ಆತನನ್ನು ಭಾರತಕ್ಕೆ ವಿಚಾರಣೆಗೆ ಕಳಿಸುವಂತೆ ಅಧಿಕೃತವಾಗಿ ಮನವಿ ಸಲ್ಲಿಸಲಾಗಿದೆ. ಜೈಲಿನಲ್ಲಿ ಕಂಬಿ ಹಿಂದಿರುವ ಮೆಹುಲ್ ಚೋಕ್ಸಿ ಕಣ್ಣುಗಳು ಊದಿಕೊಂಡಿವೆ, ಮತ್ತು ದೇಹದ ಮೇಲೆ ಗಾಯದ ಗುರುತುಗಳಿವೆ ಪಂಜಾಬ್ ನ್ಯಾಷನಲ್ ಬ್ಯಾಂಕಿನ ಮುಂಬೈ ಶಾಖೆಯೊಂದರಲ್ಲಿ 13,500 ಕೋಟಿ ರೂ.ಗಳ ವಂಚನೆ ಮತ್ತು ಅಕ್ರಮ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ನೀರವ್ ಮೋದಿ ಜತೆಗೆ ಮೆಹುಲ್ ಚೊಕ್ಸಿ ಕೂಡಾ ಆರೋಪಿಯಾಗಿದ್ದು, ಕೆರಿಬಿಯನ್ ದ್ವೀಪ ರಾಷ್ಟ್ರ ಆಂಟಿಗಾ ಹಾಗೂ ಬರ್ಬುಡಾದಲ್ಲಿ ಪೌರತ್ವ ಪಡೆದುಕೊಂಡಿದ್ದಾರೆ.

View full article
56 views07:18
ओपन / कमेंट
2021-05-30 07:18:13
ಧೋನಿಯೊಂದಿಗಿನ ಬಾಂಧವ್ಯವನ್ನು ಎರಡೇ ಪದದಲ್ಲಿ ವಿವರಿಸಿದ ಕೊಹ್ಲಿಗೆ ನೆಟ್ಟಿಗರ ಮೆಚ್ಚುಗೆ!

ನವದೆಹಲಿ: ಟೀಮ್​ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಬಿಡುವಿನ ಸಮಯದಲ್ಲಿ ಅಭಿಮಾನಿಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ನಡೆಸಿದ ಸಂವಾದದ ವೇಳೆ ಅಭಿಮಾನಿಯೊಬ್ಬ ಧೋನಿ ಬಗ್ಗೆ ಕೇಳಿದ ಪ್ರಶ್ನೆಗೆ ಕೊಹ್ಲಿ ಕೊಟ್ಟ ಉತ್ತರಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ಜೂನ್​ 18ರಿಂದ ಆರಂಭವಾಗುವ ನ್ಯೂಜಿಲೆಂಡ್​ ವಿರುದ್ಧದ ವರ್ಲ್ಡ್​ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಹಾಗೂ 6 ಟೆಸ್ಟ್​ ಪಂದ್ಯಗಳ ಸರಣಿಗಾಗಿ ಇಂಗ್ಲೆಂಡ್​ ಪ್ರವಾಸಕ್ಕೂ ಮುನ್ನ ವಿರಾಟ್​ ಸದ್ಯ ಮುಂಬೈನಲ್ಲಿ ಕ್ವಾರಂಟೈನ್​ನಲ್ಲಿದ್ದಾರೆ. ಶನಿವಾರ ಅಭಿಮಾನಿಗಳೊಂದಿಗೆ ಇನ್​ಸ್ಟಾಗ್ರಾಂನಲ್ಲಿ ಸಂವಹನ ನಡೆಸಿದ ಕೊಹ್ಲಿ, ಅಭಿಮಾನಿಗಳು ಕೇಳಿದ ಅನೇಕ ಪ್ರಶ್ನೆಗಳಿಗೆ ಉತ್ತರ ನೀಡಿದರು. ಈ ವೇಳೆ ಧೋನಿ ಮತ್ತು ನಿಮ್ಮ ನಡುವಿನ ಬಾಂದವ್ಯದ ಬಗ್ಗೆ ಹೇಳಿ ಎಂದು ಅಭಿಮಾನಿಯೊಬ್ಬ ಕೇಳಿದ ಪ್ರಶ್ನೆಗೆ 'ನಂಬಿಕೆ' ಮತ್ತು 'ಗೌರವ' ಇದೆ ಎನ್ನುವ ಮೂಲಕ ಕೊಹ್ಲಿ ಬಹಳ ಸೊಗಸಾಗಿ ಉತ್ತರಿಸಿದರು.

View full article
62 views04:18
ओपन / कमेंट
2021-05-30 07:18:11
ಮೇ 30ರ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದಿನ ಬಿಟ್ಟು ದಿನ ತೈಲ ದರ ಏರಿಕೆ ಮಾಡುತ್ತಿದ್ದು, ಭಾನುವಾರ(ಮೇ 30) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿವೆ. ಈಗಾಗಲೇ ಮುಂಬೈ ಸೇರಿದಂತೆ ದೇಶದ ಕೆಲವು ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರ 100ರ ಗಡಿದಾಟಿದೆ. ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 93.94 ರೂಪಾಯಿ ತಲುಪಿದೆ. ಡೀಸೆಲ್ ದರ ಲೀಟರ್‌ಗೆ 84.61 ರೂಪಾಯಿಗೆ ಮುಟ್ಟಿದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

View full article
55 views04:18
ओपन / कमेंट
2021-05-30 07:18:09
ಆಸ್ಟ್ರೇಲಿಯಾದಲ್ಲಿ ಹೆಚ್ಚಾದ ಇಲಿಗಳ ಹಾವಳಿ: ಪ್ಲೇಗ್ ಭೀತಿ; ಭಾರತದಿಂದ ಪಾಷಾಣ ಆಮದಿಗೆ ಅಸ್ತು

ಮೆಲ್ಬರ್ನ್: ಆಸ್ಟ್ರೇಲಿಯಾದ ನ್ಯೂಸೌತ್‌ ವೇಲ್ಸ್‌ ನಲ್ಲಿ ಎಲ್ಲೆಲ್ಲೂ ಇಲಿಗಳ ಹಾವಳಿ ಅಧಿಕವಾಗಿದ್ದು, ಅಲ್ಲಿ ಶತಮಾನಗಳ ಹಿಂದೆ ಬಂದು ಹೋಗಿದ್ದ ಪ್ಲೇಗ್‌ ರೋಗದ ಭೀತಿ ಆವರಿಸಿದೆ. ನ್ಯೂಸೌತ್‌ ವೇಲ್ಸ್‌ನ ಗ್ರಾಮೀಣ ಪ್ರದೇಶಗಳಲ್ಲಿರುವ ರೈತರ ಮನೆಗಳಲ್ಲಿ, ಭತ್ತದ ಕಣಜಗಳಲ್ಲಿ, ಕೊಟ್ಟಿಗೆಗಳಲ್ಲಿ ಇಲಿಗಳು ಎಗ್ಗಿಲ್ಲದೆ ಓಡಾಡುತ್ತಿವೆ. ನೋಡನೋಡುತ್ತಲೇ ಅವುಗಳ ಸಂತತಿ ಹತ್ತಾರು ಪಟ್ಟು ಹೆಚ್ಚಾಗಿದೆ. ಅವುಗಳ ಕಾಟದಿಂದ ಪಾರಾಗಲು ರೈತರು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ. ಆ ಪ್ರಾಂತ್ಯದ ಆಸ್ಪತ್ರೆಗಳಲ್ಲೂ ಇಲಿಗಳ ಕಾಟ ಜೋರಾಗಿದೆ ಎಂದು ಹೇಳಲಾಗಿದೆ. ರೈತರು ಹಾಗೂ ಆಸ್ಪತ್ರೆಯ ರೋಗಿಗಳು ಇಲಿಗಳ ಕಡಿತಕ್ಕೆ ತುತ್ತಾಗುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪ್ರೇಯಸಿಯ ಜೊತೆಗೆ ವಿವಾಹ ಬಂಧನಕ್ಕೆ ಒಳಗಾದ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಭಾರತದಿಂದ ಪಾಷಾಣ ಆಮದಿಗೆ ಅಸ್ತು: ಇಲಿಗಳ ನಿಯಂತ್ರಣಕ್ಕೆ ಮುಂದಾಗಿರುವ ನ್ಯೂವೇಲ್ಸ್‌ ಸರ್ಕಾರ, ಈ ಹಿಂದೆ ಅಲ್ಲಿ ನಿಷೇಧಿಸಲ್ಪಟ್ಟಿದ್ದ ಬ್ರೋಮೊಡಿಯೊಲೋನ್‌ ಎಂಬ ಪಾಷಾಣವನ್ನು ತರಿಸಲು ನಿರ್ಧರಿಸಿದೆ.

View full article
55 views04:18
ओपन / कमेंट
2021-05-30 07:18:06
ಡೊಮಿನಿಕಾದಲ್ಲಿ ಕಂಬಿಯ ಹಿಂದೆ ಮೆಹುಲ್ ಚೋಕ್ಸಿ: ಕೈ ಮೇಲೆ ಸುಟ್ಟಗಾಯಗಳು ಪತ್ತೆ; ಹಲ್ಲೆ ಆರೋಪ

ನವದೆಹಲಿ: ಡೊಮಿನಿಕಾದಲ್ಲಿ ಬಂಧಿಸಲ್ಪಟ್ಟಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಇದೀಗ ಪೊಲೀಸ್ ಕಸ್ಟಡಿಯಲ್ಲಿದ್ದು, ಈ ಕುರಿತ ಫೋಟೋಗಳನ್ನು ಅಲ್ಲಿನ ಸ್ಥಳೀಯ ಮಾಧ್ಯಮಗಳು ಬಿಡುಗಡೆ ಮಾಡಿದೆ. ಈಗಾಗಲೇ ನ್ಯಾಯಾಲಯವು ಬುಧವಾರದವರೆಗೆ (2-6-2021)ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿರುವುದರಿಂದ, ಮೆಹುಲ್ ಚೋಕ್ಸಿ ಲಾಕ್ ಅಪ್ ನಲ್ಲಿದ್ದಾರೆ. ಚೋಕ್ಸಿ ಕಂಬಿಯ ಹಿಂದೆ ನಿಂತಿರುವ ಕೆಲವೊಂದು ಫೋಟೋಗಳು ಹೊರಬಿದ್ದಿದ್ದು ದೇಹದಲ್ಲಿ ಗಾಯದ ಗುರುತುಗಳು ಪತ್ತೆಯಾಗಿವೆ. ಮಾತ್ರವಲ್ಲದೆ ಕೈಯಲ್ಲಿ ಸುಟ್ಟ ಗಾಯಗಳು ಪತ್ತೆಯಾಗಿದೆ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ. ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಚೋಕ್ಸಿ ಪರ ವಕೀಲರು, ಆಯಂಟಿಗುವಾ ಮತ್ತು ಬಾರ್ಬುಡಾದಿಂದ ಮೆಹುಲ್ ಚೋಕ್ಸಿ ಅಪಹರಿಸಲ್ಪಟ್ಟಿದ್ದು, ಬಲವಂತವಾಗಿ ಡೊಮಿನಿಕಾಗೆ ಕರೆತರಲಾಗಿದೆ.

View full article
59 views04:18
ओपन / कमेंट
2021-05-30 04:18:11
ಉತ್ತರಕನ್ನಡ: ವೈದ್ಯರಿದ್ದಲ್ಲಿ ಶುಶ್ರೂಷಕರಿಲ್ಲ, ಶುಶ್ರೂಷಕರಿದ್ದ ಕಡೆ ವೈದ್ಯರಿಲ್ಲ

ಕೊರೊನಾ ಸೋಂಕು ಈಗ ದೊಡ್ಡ ನಗರಗಳಿಂದ ರಾಜ್ಯದ ಮೂಲೆ ಮೂಲೆಯ ಹಳ್ಳಿಗಳಿಗೆ ತನ್ನ ಕಬಂಧಬಾಹುಗಳನ್ನು ಚಾಚಿದೆ. ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ ಇರುವುದರಿಂದ ಕೋವಿಡ್‌ ಪೀಡಿತರು ಚಿಕಿತ್ಸೆಗಾಗಿ ಪರದಾಡುವಂತಾಗಿದೆ. ಈ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳೇನು, ಚಿಕಿತ್ಸೆಗೆ ಇರುವ ಕೊರತೆಗಳೇನು ಎಂಬ ವಸ್ತುಸ್ಥಿತಿಯ ಚಿತ್ರಣ ನೀಡಲು ಪ್ರಜಾವಾಣಿ ಸ್ಥಳಕ್ಕೆ ಭೇಟಿ ನೀಡಿ ಸರಣಿ ವರದಿಗಳನ್ನು ನೀಡುತ್ತಿದೆ. *** ಕಾರವಾರ/ ಶಿರಸಿ: ವೈದ್ಯರಿದ್ದ ಕಡೆ ಶುಶ್ರೂಷಕರ ಕೊರತೆ, ಶುಶ್ರೂಷಕರಿದ್ದ ಕಡೆ ವೈದ್ಯರಿಲ್ಲ. ಇಬ್ಬರೂ ಇದ್ದ ಕಡೆ ಡಿ-ಗ್ರೂಪ್ ಸಿಬ್ಬಂದಿಯನ್ನು ಹುಡುಕಬೇಕು. ಇದು ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಆರೋಗ್ಯ ಕ್ಷೇತ್ರದಲ್ಲಿರುವ ಸಾಮಾನ್ಯ ಸಮಸ್ಯೆ.ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

View full article
63 views01:18
ओपन / कमेंट
2021-05-30 04:18:09
ಮಂಡ್ಯ: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನೆಪಕ್ಕಷ್ಟೇ ಕೋವಿಡ್‌ ಲಸಿಕೆ ವಿತರಣೆ

ಕೊರೊನಾ ಸೋಂಕು ಈಗ ದೊಡ್ಡ ನಗರಗಳಿಂದ ರಾಜ್ಯದ ಮೂಲೆ ಮೂಲೆಯ ಹಳ್ಳಿಗಳಿಗೆ ತನ್ನ ಕಬಂಧಬಾಹುಗಳನ್ನು ಚಾಚಿದೆ. ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ ಇರುವುದರಿಂದ ಕೋವಿಡ್‌ ಪೀಡಿತರು ಚಿಕಿತ್ಸೆಗಾಗಿ ಪರದಾಡುವಂತಾಗಿದೆ. ಈ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳೇನು, ಚಿಕಿತ್ಸೆಗೆ ಇರುವ ಕೊರತೆಗಳೇನು ಎಂಬ ವಸ್ತುಸ್ಥಿತಿಯ ಚಿತ್ರಣ ನೀಡಲು ಪ್ರಜಾವಾಣಿ ಸ್ಥಳಕ್ಕೆ ಭೇಟಿ ನೀಡಿ ಸರಣಿ ವರದಿಗಳನ್ನು ನೀಡುತ್ತಿದೆ. *** ಮಂಡ್ಯ: ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನೆಪಕ್ಕಷ್ಟೇ ಕೋವಿಡ್‌ ಲಸಿಕೆ ಸರಬರಾಜಾಗುತ್ತಿದ್ದು, ತಾಲ್ಲೂಕು ಕೇಂದ್ರದಲ್ಲಿ ಹಳ್ಳಿಯ ಜನರು ನಸುಕಿನ 5 ಗಂಟೆಯಿಂದಲೇ ಸರದಿಯಲ್ಲಿ ನಿಲ್ಲುತ್ತಾರೆ.ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

View full article
58 views01:18
ओपन / कमेंट
2021-05-29 19:18:04
ರಾಜ್ಯದಲ್ಲಿಂದು ಕೊರೋನಾಗೆ 492 ಮಂದಿ ಬಲಿ, 20628 ಹೊಸ ಕೇಸ್ ..!

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಮುಂದುವರೆದಿದ್ದು ರಾಜ್ಯದಾದ್ಯಂತ ಕಳೆದ 24 ಗಂಟೆಯಲ್ಲಿ 492 ಪ್ರಾಣ ಕಳೆದುಕೊಂಡಿದ್ದಾರೆ, ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 20628 ಹೊಸ ಕೇಸ್ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2567449 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 28298ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 4889 ಜನರಿಗೆ ಕೊರೋನಾ ತಗುಲಿದೆ, ನಗರದಲ್ಲಿ ಇಂದು 278 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 1154503ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ ಒಟ್ಟು 12891 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇಂದು ರಾಜ್ಯಾದ್ಯಂತ 42444 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 2189064 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

View full article
69 views16:18
ओपन / कमेंट
2021-05-29 16:18:11
ರಾಜ್ಯದಲ್ಲಿ 1,100 ಬ್ಲ್ಯಾಕ್ ಫಂಗಸ್ ಪ್ರಕರಣ: ಡಿಸಿಎಂ ಅಶ್ವಥ್ ನಾರಾಯಣ

ರಾಜ್ಯದಲ್ಲಿ 1,100 ಬ್ಲ್ಯಾಕ್​​​ ಫಂಗಸ್ ಪ್ರಕರಣಗಳು ಪತ್ತೆಯಾಗಿದ್ದು, ಚಿಕಿತ್ಸೆಗೆ ಅಗತ್ಯ ಔಷಧ ಪೂರೈಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಟಾಸ್ಕ್​​ ಪೋರ್ಸ್​​ ಸಮಿತಿ ಅಧ್ಯಕ್ಷರು ಆದ ಅಶ್ವಥ್ ನಾರಾಯಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಔಷಧ ಪೂರೈಸುವ ವ್ಯವಸ್ಥೆ ಮಾಡಲಾಗಿದೆ.ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

View full article
30 views13:18
ओपन / कमेंट
2021-05-29 16:18:08
ಅಡುಗೆ ಎಣ್ಣೆ ದರ ನಿಯಂತ್ರಿಸಿ: ಪ್ರಧಾನಿ, ಸಿಎಂಗೆ ಡಿ.ಕೆ ಸುರೇಶ್ ಪತ್ರ‌

ರಾಮನಗರ, ಮೇ 29: ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಅಡುಗೆ ಎಣ್ಣೆ ದರ ದುಪ್ಪಟ್ಟಾಗಿರುವುದರಿಂದ ಜನ ಹೈರಾಣಾಗಿದ್ದಾರೆ. ಹೀಗಾಗಿ ಅಡುಗೆ ಎಣ್ಣೆ ದರ ಏರಿಕೆಯನ್ನು ನಿಯಂತ್ರಣ ಮಾಡುವಂತೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ ಸುರೇಶ್ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ. ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕೇಂದ್ರ ಆಹಾರ ಸಚಿವ ಮತ್ತು ನಾಗರಿಕ ಸರಬರಾಜು ಸಚಿವ ಪಿಯೂಷ್ ಗೋಯಲ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ಅವರಿಗೆ ಪತ್ರ ಬರೆದು ಸಂಸದ ಡಿ.ಕೆ ಸುರೇಶ್ ಮನವಿ ಮಾಡಿದ್ದಾರೆ. "ಲಾಕ್‌ಡೌನ್ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಜನಸಾಮಾನ್ಯರ ಮೇಲೆ ಆರ್ಥಿಕ ಒತ್ತಡ ತಂದಿದೆ.

View full article
28 views13:18
ओपन / कमेंट