Get Mystery Box with random crypto!

Kannada News Daily

टेलीग्राम चैनल का लोगो kannadanewsdaily — Kannada News Daily K
टेलीग्राम चैनल का लोगो kannadanewsdaily — Kannada News Daily
चैनल का पता: @kannadanewsdaily
श्रेणियाँ: समाचार
भाषा: हिंदी
ग्राहकों: 209

Ratings & Reviews

2.50

2 reviews

Reviews can be left only by registered users. All reviews are moderated by admins.

5 stars

0

4 stars

0

3 stars

1

2 stars

1

1 stars

0


नवीनतम संदेश 38

2021-05-26 07:18:11
ರಾಜ್ಯದ ಕರಾವಳಿ ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಮೇ 26: ಯಾಸ್ ಚಂಡಮಾರುತ ಪ್ರಭಾವ ರಾಜ್ಯದ ಕರಾವಳಿ ಜಿಲ್ಲೆಗಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದ್ದು, ಅದರ ಜತೆಗೆ ಹಲವು ಜಿಲ್ಲೆಗಳ ಮೇಲೂ ಕೂಡ ಪರಿಣಾಮ ಬೀರಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 2 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇನ್ನು ರಾಜ್ಯದ ವಿವಿಧೆಡೆ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

View full article
48 views04:18
ओपन / कमेंट
2021-05-26 07:18:08
ಕೊರೊನಾ ಆತಂಕದ ಮಧ್ಯೆ ಮೆಟ್ರೊ ಪ್ರಯಾಣಿಕರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ

ಬೆಂಗಳೂರು, ಮೇ 25: ಕೊರೊನಾ ಆತಂಕದ ಮಧ್ಯೆ ಮೆಟ್ರೋ ಪ್ರಯಾಣಿಕರಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ ಕೊಟ್ಟಿದ್ದಾರೆ. ನಮ್ಮ ಮೆಟ್ರೊ 2ನೇ ಹಂತದ ರೀಚ್ 2 ಮೈಸೂರು ರಸ್ತೆ ವಿಸ್ತರಿತ ಮೆಟ್ರೋ ಮಾರ್ಗವನ್ನು ಮಂಗಳವಾರ ಮುಖ್ಯಮಂತ್ರಿ ಯಡಿಯೂರಪ್ಪ ಪರಿಶೀಲನೆ ನಡೆಸಿದ್ದು, ನೂತನ ಮೆಟ್ರೋ ಮಾರ್ಗದ ಕುರಿತು ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಇದೇ ಜುಲೈನಲ್ಲಿ ಈ ಮೆಟ್ರೋ ಮಾರ್ಗ ಆರಂಭವಾಗುವುದಾಗಿ ತಿಳಿಸಿದ್ದಾರೆ. ನಾಯಂಡಹಳ್ಳಿಯಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗೆ ಸಂಚರಿಸಿ ಮೆಟ್ರೋ ಮಾರ್ಗ, ನಿಲ್ದಾಣಗಳಲ್ಲಿನ ಸೌಲಭ್ಯಗಳನ್ನು ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, "ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ ರೀಚ್ 2ರ ವಿಸ್ತರಣಾ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಪೂರ್ವಭಾವಿಯಾಗಿ ನಾನು ಇಂದು ಈ ಮಾರ್ಗದ ಪರಿವೀಕ್ಷಣೆ ನಡೆಸಿದ್ದೇನೆ.

View full article
47 views04:18
ओपन / कमेंट
2021-05-26 07:18:04
ನಾಯಕತ್ವ ಬದಲಾವಣೆ ಗಾಳಿ ಸುದ್ದಿ ಬೆನ್ನಲ್ಲೇ, ಬಿಜೆಪಿ ಶಾಸಕರ ಸಭೆ ಕರೆದ ಸಿಎಂ ಯಡಿಯೂರಪ್ಪ

ಬೆಂಗಳೂರು, ಮೇ 26:ರಾಜ್ಯದಲ್ಲಿ ಎಲ್ಲೆಲ್ಲೂ ನಾಯಕತ್ವ ಬದಲಾವಣೆಯ ಗಾಳಿ ಸುದ್ದಿ ಹರಡಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶಾಸಕರ ಸಭೆ ಕರೆದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ಹೈಕಮಾಂಡ್ ಶಾಸಕರ ಸಭೆ ಕರೆಯುವಂತೆ ಯಡಿಯೂರಪ್ಪ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಜೂನ್ 7 ರಂದು ಯಡಿಯೂರಪ್ಪ ಶಾಸಕರ ಸಭೆ ಕರೆದಿದ್ದಾರೆ. ಕರ್ನಾಟಕದಲ್ಲಿ ಲಾಕ್‌ಡೌನ್ ಜೂನ್ 7ರವರೆಗೆ ವಿಸ್ತರಣೆ ಕೊರೊನಾ ಅಬ್ಬರ ನಡುವೆ ಬಿಜೆಪಿಯಲ್ಲಿ ದಿಢೀರ್ ಆಗಿ ರಾಜಕೀಯ ಬೆಳವಣಿಗೆ ಗರಿಗೆದರಿದೆ.

View full article
39 views04:18
ओपन / कमेंट
2021-05-25 22:18:11
ಹಾಸಿಗೆ ಬ್ಲಾಕಿಂಗ್ ಪ್ರಕರಣ: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಬಂಧನ

ಬೆಂಗಳೂರು: ಕೊರೊನಾ ಸೋಂಕಿತರ ಹೆಸರಿನಲ್ಲಿ ಹಾಸಿಗೆಗಳನ್ನು ಬ್ಲಾಕ್‌ ಮಾಡಿಸಿ ಮಾರುತ್ತಿದ್ದ ಪ್ರಕರಣ ಸಂಬಂಧ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಎನ್ನಲಾದ ಬಾಬುನನ್ನು (34) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 'ರೂಪೇನ ಅಗ್ರಹಾರದ ಬಾಬು ಈ ಪ್ರಕರಣದ ಪ್ರಮುಖ ಆರೋಪಿ. ಬಿಜೆಪಿ ಕಾರ್ಯಕರ್ತನೂ ಹೌದು. ಖಾಸಗಿ ಆಸ್ಪತ್ರೆಗಳ ಅಧಿಕಾರಿಗಳು, ವಾರ್‌ರೂಮ್‌ ಸಿಬ್ಬಂದಿ ಹಾಗೂ ಈಗಾಗಲೇ ಬಂಧಿಸಿರುವ ಆರೋಪಿಗಳ ಜೊತೆ ಒಡನಾಟ ಇಟ್ಟುಕೊಂಡಿದ್ದ. ಈ ಬಗ್ಗೆ ಪುರಾವೆಗಳನ್ನು ಸಂಗ್ರಹಿಸಿ ಬಂಧಿಸಲಾಗಿದೆ' ಎಂದು ಸಿಸಿಬಿ ಹಿರಿಯ ಅಧಿಕಾರಿಯೊಬ್ಬರು 'ಪ್ರಜಾವಾಣಿ'ಗೆ ಮಂಗಳವಾರ ತಿಳಿಸಿದರು. 'ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಶಾಸಕರ ಪರವಾಗಿ ಬಾಬು ಕೆಲಸ ಮಾಡುತ್ತಿದ್ದ. ಬಿಯು ಸಂಖ್ಯೆ ಪಡೆಯುವ ಸೋಂಕಿತರಿಗೆ ಸರ್ಕಾರದಿಂದ ಚಿಕಿತ್ಸೆ ಕೊಡಿಸಲೆಂದು ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಮೀಸಲಿರಿಸಲಾಗಿತ್ತು.

View full article
53 views19:18
ओपन / कमेंट
2021-05-25 22:18:07
ಸಿಬಿಐ ನಿರ್ದೇಶಕರಾಗಿ ಸುಬೋಧ್ ಕುಮಾರ್ ಜೈಸ್ವಾಲ್ ನೇಮಕ

ನವದೆಹಲಿ, ಮೇ 25: ಮಹಾರಾಷ್ಟ್ರದ ಮಾಜಿ ಪೊಲೀಸ್ ಮುಖ್ಯಸ್ಥರು ಹಾಗೂ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ರನ್ನು ಕೇಂದ್ರ ತನಿಖಾ ತಂಡದ ನಿರ್ದೇಶಕರಾಗಿ ನೇಮಕಗೊಳಿಸಿದ ಆದೇಶಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಮುಖ್ಯ ನ್ಯಾಯಮೂರ್ತಿಗಳು ನಡೆಸಿದ ಮಹತ್ವದ ಸಭೆಯ ಬಳಿಕ ಕೇಂದ್ರ ತನಿಖಾ ತಂಡಕ್ಕೆ ಹೊಸ ನಿರ್ದೇಶಕರನ್ನು ನೇಮಿಸಿ ಕೇಂದ್ರ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಯಿತು. ಸುಬೋಧ್ ಕುಮಾರ್ ಜೈಸ್ವಾಲ್ 1985ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದು ಮಹಾರಾಷ್ಟ್ರದಲ್ಲಿ ಪೊಲೀಸ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮುಂದಿನ ಎರಡು ವರ್ಷಗಳ ಅವಧಿಗೆ ನೇಮಕ: ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ರನ್ನು ಕೇಂದ್ರ ತನಿಖಾ ತಂಡದ ನೂತನ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

View full article
48 views19:18
ओपन / कमेंट
2021-05-25 19:18:07
ದೂರಸಂಪರ್ಕ ಚಿಕಿತ್ಸೆಗೆ ಕೈಕೊಟ್ಟ ವೈದ್ಯ ವಿದ್ಯಾರ್ಥಿಗಳ ಮೇಲೆ ಡಿಸಿಎಂ ಬೇಸರ

ಬೆಂಗಳೂರು, ಮೇ 25: ರಾಜ್ಯ ಕೋವಿಡ್‌ ಕಾರ್ಯಪಡೆ ಮುಖ್ಯಸ್ಥರೂ ಆದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥ್ ನಾರಾಯಣ ಹೋಮ್‌ ಐಸೋಲೇಶನ್ ಚಿಕಿತ್ಸೆಯ ಬಗ್ಗೆ ಅವಲೋಕನ ಮಾಡಿದರು. ಕೋವಿಡ್‌ ಹೋಮ್‌ ಐಸೋಲೇಶನ್‌ ವ್ಯವಸ್ಥೆಯಲ್ಲಿ ಟೆಲಿಕನ್ಸಲ್‌ಟೆನ್ಸಿ ಮೂಲಕ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಸ್ಟೆಪ್‌ಡೌನ್‌ ವ್ಯವಸ್ಥೆಯ ಬಗ್ಗೆ ಪರಾಮರ್ಶೆಯನ್ನು ಡಿಸಿಎಂ ನಡೆಸಿದ್ದಾರೆ. ಈ ಸಂದರ್ಭದಲ್ಲಿ ದೂರಸಂಪರ್ಕದ ಮೂಲಕ ಸೋಂಕಿತರಿಗೆ ಚಿಕಿತ್ಸೆ ನೀಡಲು ಮುಂದೆ ಬಾರದ ವಿದ್ಯಾರ್ಥಿಗಳ ವರ್ತನೆಗೆ ಡಿಸಿಎಂ ಅತೀವ ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ವರ್ಚುವಲ್‌ ವೇದಿಕೆ ಮೂಲಕ ʼಸ್ಟೆಪ್‌ಡೌನ್‌ʼ ವ್ಯವಸ್ಥೆಯ ಪ್ರಗತಿ ಪರಿಶೀಲನೆಯನ್ನು ಡಿಸಿಎಂ ನಡೆಸಿದರು. ಈ ಸಂದರ್ಭದಲ್ಲಿ ಎರಡನೇ ಅಲೆಯಲ್ಲಿ ಹೋಮ್ ಐಸೋಲೇಶನ್ ವ್ಯವಸ್ಥೆ ಆಪ್ತರಕ್ಷಕನಂತೆ ಬದಲಾಗಿದೆ.ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

View full article
57 views16:18
ओपन / कमेंट
2021-05-25 16:18:07
ಹಿಡಕಲ್ ಜಲಾಶಯದಿಂದ 7 ದಿನ ನೀರು ಬಿಡುಗಡೆ: ಬಾಲಚಂದ್ರ ಜಾರಕಿಹೊಳಿ

ಗೋಕಾಕ: 'ಜನ ಹಾಗೂ ಜಾನುವಾರುಗೆ ಕುಡಿಯುವ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ಮೇ 27ರಿಂದ 7 ದಿನಗಳವರೆಗೆ ನೀರು ಬಿಡುಗಡೆ ಮಾಡಲಾಗುವುದು' ಎಂದು ಕೆಎಂಎಫ್‌ ಅಧ್ಯಕ್ಷರೂ ಆಗಿರುವ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. 'ಘಟಪ್ರಭಾ ಎಡದಂಡೆ ಕಾಲುವೆ ಮತ್ತು ಘಟಪ್ರಭಾ ಬಲದಂಡೆ ಕಾಲುವೆಗಳಿಗೆ ತಲಾ 1.50 ಟಿಎಂಸಿ ಹಾಗೂ ಸಿಬಿಸಿ ಕಾಲುವೆಗೆ 0.50 ಟಿಎಂಸಿ ನೀರು ಹರಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಚರ್ಚಿಸಿ ಮನವರಿಕೆ ಮಾಡಿಕೊಟ್ಟಿದ್ದೇನೆ.

View full article
61 views13:18
ओपन / कमेंट
2021-05-25 16:18:04
ಚಿನ್ನದ ಬೆಲೆ ಇಳಿಕೆ: ದೇಶದ ಪ್ರಮುಖ ನಗರಗಳಲ್ಲಿ ಮೇ 25ರ ಬೆಲೆ ಹೀಗಿದೆ

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಮಂಗಳವಾರ ದೇಶದ ಪ್ರಮುಖ ನಗರಗಳಲ್ಲ ಕೊಂಚ ಇಳಿಕೆಗೊಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,930 ರೂಪಾಯಿಗೆ ತಲುಪಿದೆ. ಶುದ್ಧ ಚಿನ್ನ 10 ಗ್ರಾಂ 50,830 ರೂಪಾಯಿ ದಾಖಲಾಗಿದೆ. ಆದರೆ ಬೆಳ್ಳಿ ಬೆಲೆಯು ಕೆಜಿಗೆ 300 ರೂಪಾಯಿ ಇಳಿಕೆಗೊಂಡು 71,200 ರೂಪಾಯಿ ಮುಟ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ. ರಾಜ್ಯದ ಪ್ರಮುಖ ನಗರಗಳು ನಗರ: ಬೆಂಗಳೂರು 22ಕ್ಯಾರೆಟ್ ಚಿನ್ನ ರೂ.

View full article
59 views13:18
ओपन / कमेंट
2021-05-25 13:18:12
ಕುವೈಟ್, ಯುಎಇನಿಂದ ಮಂಗಳೂರಿಗೆ ಬಂತು 272.820 ಮೆಟ್ರಿಕ್ ಟನ್ ಆಮ್ಲಜನಕ ಹೊತ್ತ ಹಡಗು

ಪಣಂಬೂರು: ಕುವೈಟ್ ಮತ್ತು ಯುಎಇ ರಾಷ್ಟ್ರಗಳಿಂದ 272.820 ಮೆಟ್ರಿಕ್ ಟನ್ ಆಮ್ಲಜನಕವನ್ನು ಹೊತ್ತ ಹಡಗು ನವಮಂಗಳೂರು ಬಂದರಿಗೆ ಮಂಗಳವಾರ ಬಂದಿದೆ. ನೌಕಾಪಡೆಯ ಹಡಗು ಐಎನ್‌ಎಸ್ 'ಶಾರ್ದೂಲ್' ನವಮಂಗಳೂರು ಬಂದರಿಗೆ 11 ಕಂಟೈನರ್ ಗಳಲ್ಲಿ (ಇದರಲ್ಲಿ 3 ಟ್ರೈಲರ್ ಮೌಂಟೆಡ್ ಕಂಟೈನೆರ್) ದ್ರವೀಕೃತ ಆಮ್ಲಜನಕ ಮತ್ತು 60 ಪ್ಯಾಲೇಟ್ ಗಳಲ್ಲಿ ಆಮ್ಲಜನಕ ಸಿಲಿಂಡರ್ ಗಳನ್ನು (ಒಟ್ಟು 272.820 ಮೆಟ್ರಿಕ್ ಟನ್) ಹೊತ್ತು ಬಂದಿದೆ. ಹಡಗಿನಿಂದ ಈ ಸರಕನ್ನು ಇಳಿಸಲು ಮಂಗಳೂರಿನ ಗಣೇಶ್ ಶಿಪ್ಪಿಂಗ್ ಏಜೆನ್ಸಿ ಮುತುವರ್ಜಿ ವಹಿಸಿದ್ದು ಉಚಿತವಾಗಿ ಕಾರ್ಯ ನಿರ್ವಸುತ್ತಿದೆ.

View full article
18 views10:18
ओपन / कमेंट
2021-05-25 13:18:07
ಮೈಕ್ರೋಸಾಪ್ಟ್ ಸರ್ಫೇಸ್‍ ಲ್ಯಾಪ್‍ಟಾಪ್‍ 4 ಭಾರತದ ಮಾರುಕಟ್ಟೆಗೆ

ಮೈಕ್ರೋಸಾಫ್ಟ್ ಇಂಡಿಯಾ ಶೈಕ್ಷಣಿಕ ಗ್ರಾಹಕರು ಮತ್ತು ಅಧಿಕೃತ ರೀಟೇಲರ್‌ಗಳಿಗೆ ಅನುಕೂಲಕರವಾದ ಸರ್ಫೇಸ್ ಲ್ಯಾಪ್‌ಟಾಪ್ 4 ಅನ್ನು ಬಿಡುಗಡೆ ಮಾಡಿದೆ. ಈ ಲ್ಯಾಪ್‌ಟಾಪ್ ಅಮೆಜಾನ್.ಇನ್‌ನಲ್ಲಿ ಲಭ್ಯವಿದೆ. ಈ ಲ್ಯಾಪ್‌ಟಾಪ್ ನಿರಂತರವಾಗಿ ಕೆಲಸ ಮಾಡುವ ಅಥವಾ ಕಲಿಕೆಯಲ್ಲಿ ತೊಡಗುವವರಿಗೆ ಅಥವಾ ಹೆಚ್ಚು ಸಮಯ ಕೆಲಸ ಮಾಡುವ ಬಳಕೆದಾರರಿಗೆ ಹೇಳಿ ಮಾಡಿಸಿದ ಉತ್ಪನ್ನವಾಗಿದೆ. ಈ ಬಗ್ಗೆ ಮಾತನಾಡಿದ ಮೈಕ್ರೋಸಾಫ್ಟ್ ಇಂಡಿಯಾದ ಚೀಫ್ ಆಪರೇಟಿಂಗ್ ಆಫೀಸರ್ ರಾಜೀವ್ ಸೋಧಿ ಅವರು, ''ನಾವು ಭಾರತಕ್ಕೆ ಹೊಸ ಸರ್ಫೇಸ್ ಲ್ಯಾಪ್‌ಟಾಪ್ 4 ಅನ್ನು ಬಿಡುಗಡೆ ಮಾಡಲು ಸಂತಸವೆನಿಸುತ್ತಿದೆ. ಈ ಮೂಲಕ ನಾವು ನಮ್ಮ ಆವಿಷ್ಕಾರಕ ಮತ್ತು ನಾವೀನ್ಯತೆಯ ಉತ್ಪನ್ನಗಳು ಮತ್ತು ಪರಿಹಾರಗಳನ್ನು ನಮ್ಮ ಗ್ರಾಹಕರಿಗೆ ನೀಡಲು ಬಯಸಿದ್ದೇವೆ. ಇದರ ಮೂಲಕ ಗ್ರಾಹಕರು ಅಥವಾ ಬಳಕೆದಾರರು ಹೊಸ ಮಾರ್ಗಗಳಲ್ಲಿ ಸತತ ಕೆಲಸ ನಿರ್ವಹಣೆ ಮತ್ತು ಕಲಿಕೆಯಲ್ಲಿ ತೊಡಗಬಹುದಾಗಿದೆ.

View full article
16 views10:18
ओपन / कमेंट