Get Mystery Box with random crypto!

Kannada News Daily

टेलीग्राम चैनल का लोगो kannadanewsdaily — Kannada News Daily K
टेलीग्राम चैनल का लोगो kannadanewsdaily — Kannada News Daily
चैनल का पता: @kannadanewsdaily
श्रेणियाँ: समाचार
भाषा: हिंदी
ग्राहकों: 209

Ratings & Reviews

2.50

2 reviews

Reviews can be left only by registered users. All reviews are moderated by admins.

5 stars

0

4 stars

0

3 stars

1

2 stars

1

1 stars

0


नवीनतम संदेश 51

2021-05-13 07:18:03
ಬೆಡ್‌ ಬ್ಲಾಕಿಂಗ್‌ ದಂಧೆಗೆ ಬ್ರೇಕ್‌: ಅಂಗೈಯಲ್ಲಿ ಬೆಡ್‌ ಮಾಹಿತಿ..!

ಸೋಮರಡ್ಡಿ ಅಳವಂಡಿ ಕೊಪ್ಪಳ(ಮೇ.13): ಆಸ್ಪತ್ರೆಯಲ್ಲಿ ಬೆಡ್‌ ಖಾಲಿ ಇರುವ ಮಾಹಿತಿಯ ಬಗ್ಗೆ ತಡಕಾಡುತ್ತಿದ್ದಿರಾ? ಆಸ್ಪತ್ರೆಯವರು ಖಾಲಿ ಇದ್ದರೂ ಸುಳ್ಳು ಹೇಳಿತ್ತಿರಬಹುದೇ? ತುರ್ತಾಗಿ ದಾಖಲಾಗಬೇಕಾದಾಗ ಯಾವ ಆಸ್ಪತ್ರೆಯಲ್ಲಿ ಬೆಡ್‌ ಖಾಲಿ ಇವೆ ಎನ್ನುವ ಸಮಸ್ಯೆ ಎದುರಿಸುತ್ತಿದ್ದಿರಾ? ಇದೆಲ್ಲಕ್ಕೂ ಪರಿಹಾರವನ್ನು ಕೊಪ್ಪಳ ಜಿಲ್ಲಾಡಳಿತ ಸೂಚಿಸಿದೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಸಾಮಾನ್ಯ ಬೆಡ್‌, ಆಕ್ಸಿಜನ್‌ ಬೆಡ್‌, ವೆಂಟಿಲೇಟರ್‌ ಬೆಡ್‌ಗಳ ಮಾಹಿತಿ ಮತ್ತು ಅವು ಖಾಲಿ ಇರುವಿಕೆಯನ್ನು ಅಂಗೈಯಲ್ಲಿರುವ ಮೊಬೈಲ್‌ನಲ್ಲಿ ನೋಡಬಹುದು. ನಿಗದಿಪಡಿಸಿರುವ ವೆಬ್‌ನಲ್ಲಿಯೂ ನೋಡಬಹುದು ಅಥವಾ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿಯೂ ನೋಡಬಹುದು.

View full article
45 views04:18
ओपन / कमेंट
2021-05-12 16:18:09
'ರಿಮೋಟ್‌ನಲ್ಲಿ ಚಾನಲ್ ಬದಲಿಸುವ ಆಯ್ಕೆಯೂ ಇದೆಯಲ್ಲ'

ಬೆಂಗಳೂರು(ಮೇ 12) ಕೋವಿಡ್ ನಿಂದ ಸಾವನ್ನಪ್ಪುವ ದೃಶ್ಯಗಳಿಗೆ ಮಾಧ್ಯಮದಲ್ಲಿ ನಿರ್ಬಂಧ ಕೋರಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆದಿದೆ. ಲೆಟ್ಸ್ ಕಿಟ್ ಫೌಂಡೇಶನ್ ಪಿಐಎಲ್ ಸಲ್ಲಿಸಿತ್ತು. ಮಾಧ್ಯಮಗಳು ಜೀವಭಯದ ಫೋಬಿಯಾ ಹುಟ್ಟಿಸುತ್ತಿವೆ ಕೋವಿಡ್ ನಿಂದ ನರಳುವ ಸಾವಿನ ದೃಶ್ಯ ಪ್ರಸಾರ ಮಾಡುತ್ತಿವೆ. ಸೋಂಕಿತರಲ್ಲಿ ಸಾವಿನ ಭೀತಿ ಹುಟ್ಟಿಸುವ ರೀತಿಯಲ್ಲಿ ಸುದ್ದಿ ಪ್ರಸಾರ ಮಾಡಲಾಗುತ್ತಿದೆ ಎಂದು ಆರೋಪಿಸಿತ್ತು. ಇಂಥ ದೃಶ್ಯಗಳು ಜನರಲ್ಲಿ ಭಯ, ಆತಂಕ, ಖಿನ್ನತೆ ಮೂಡಿಸುತ್ತಿದೆ ಚಿತಾಗಾರಗಳ ದೃಶ್ಯಗಳನ್ನು ಪ್ರಸಾರ ಮಾಡಲಾಗುತ್ತಿದೆ. ವೀಕ್ಷಕರಿಗೆ ಮಾನಸಿಕ ಒತ್ತಡವಾಗಿ ಸಾವು ಸಂಭವಿಸಬಹುದು. ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿತ್ತು.

View full article
42 views13:18
ओपन / कमेंट
2021-05-12 16:18:04
ಶಿವಮೊಗ್ಗ : ನಾಳೆಯಿಂದ ಪಾಲಿಕೆ ವ್ಯಾಪ್ತಿಯಲ್ಲಿರುವ 'ಇಂದಿರಾ ಕ್ಯಾಂಟೀನ್'ಗಳಲ್ಲಿ 'ಉಚಿತ ಊಟ' ಲಭ್ಯ

ಶಿವಮೊಗ್ಗ : ಲಾಕ್ ಡೌನ್ ಸಂದರ್ಭದಲ್ಲಿ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಪೌರಾಡಳಿತ ಇಲಾಖೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಕೂಲಿ ಕಾರ್ಮಿಕರು,ವಲಸಿಗರು ಮತ್ತು ಇತರೇ ದುರ್ಬಲ ವರ್ಗದವರಿಗೆ ಉಚಿತ ಊಟದ ವ್ಯವಸ್ಥೆ ಮಾಡುವಂತೆ ಸೂಚಿಸಿತ್ತು. ಈ ಸೂಚನೆ ಹಿನ್ನಲೆಯಲ್ಲಿ ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿರುವ ಇಂದಿರಾ ಕ್ಯಾಂಟಿನ್ ಗಳಲ್ಲಿ ನಾಳೆಯಿಂದ ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟಗಳನ್ನು ಉಚಿತವಾಗಿ ನೀಡಲಿದೆ. ಈ ಕುರಿತಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆ ಹೊರಡಿಸಿದ್ದು, ಸರ್ಕಾರವು ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ತಡೆಗಟ್ಟಲು ಹಾಗೂ ಪ್ರಸರಣ ಸರಪಳಿಯನ್ನು ತುಂಡರಿಸಲು ರಾಜ್ಯದಲ್ಲಿ ದಿನಾಂಕ 10-05-2021ರಿಂದ 24-05-2021ರವರೆಗೆ ಕೋವಿಡ್-19 ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿ ಆದೇಶಿಸಿರುತ್ತಾರೆ.

View full article
34 views13:18
ओपन / कमेंट
2021-05-12 13:18:13
ಕೋವಿಡ್ ಟೆಸ್ಟ್ ಕಡಿಮೆ ಮಾಡಿದ್ದೇವೆ: ಕಾರಣ ಕೊಟ್ಟ ಅಶ್ವತ್ಥ್ ನಾರಾಯಣ

ಬೆಂಗಳೂರು, (ಮೇ.12): ರಾಜ್ಯದಲ್ಲಿ ಕೊರೋನಾ ಪರೀಕ್ಷೆಯನ್ನು ಕಡಿಮೆ ಮಾಡಲಾಗುತ್ತಿದೆ. ಇದರಿಂದ ಕೇಸ್‌ಗಳು ಕಡಿಮೆಯಾಗುತ್ತಿವೆ ಎನ್ನುವ ಸುದ್ದಿಗೆ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ ಸ್ಪಷ್ಟನೆ ಕೊಟ್ಟಿದ್ದಾರೆ. ನಮ್ಮ ಸಾಮರ್ಥ್ಯಕ್ಕಿಂತ ಹೆಚ್ಚು ಕೊವಿಡ್ ಟೆಸ್ಟ್ ಮಾಡುತ್ತಿದ್ದೆವು. ಇದರಿಂದ ಟೆಸ್ಟ್ ರಿಪೋರ್ಟ್ ಬರುವುದು ವಿಳಂಬವಾಗ್ತಿತ್ತು. ರಿಪೋರ್ಟ್ ಬೇಗ ಸಿಗುವಂತೆ ಮಾಡುವ ಉದ್ದೇಶದಿಂದ ರೋಗ ಲಕ್ಷಣ ಇರುವವರಿಗೆ ಮಾತ್ರ ಈಗ ಟೆಸ್ಟ್‌ ಮಾಡುತ್ತಿದ್ದೇವೆ. ಪಾಸಿಟಿವಿಟಿ ರೇಟ್ ಕಡಿಮೆ ತೋರಿಸಲು ಎಂಬುದು ಸುಳ್ಳು ಎಂದು ಡಾ. ಅಶ್ವತ್ಥ್ ನಾರಾಯಣ ಸ್ಪಷ್ಟಪಡಿಸಿದರು. ರೂಪಾಂತರಿ ಕಂಟ್ರೋಲ್ ಆಗದಿದ್ದರೆ ಮುಂದೆ ಅಪಾಯ! ಕಡಿಮೆ ಟೆಸ್ಟ್ ಮಾಡಿದಾಗಲೇ ಹೆಚ್ಚು ಪಾಸಿಟಿವಿಟಿ ಇರುತ್ತೆ. ಸರ್ಕಾರ ಯಾವುದನ್ನೂ ಮುಚ್ಚಿಡುವ ಪ್ರಯತ್ನ ಮಾಡ್ತಿಲ್ಲ.

View full article
55 views10:18
ओपन / कमेंट
2021-05-12 13:18:12
'ಪಾಸಿಟಿವ್ ಬದಲು ಪಾಸಿಟಿವ್ ಚಿಂತನೆ ಬೇಕಾಗಿದೆ' ಇಂದು ಜೈನ ಮುನಿ ಶ್ರೀ ಪ್ರಮನ್‌ಸಾಗರ್ ಜಿ ಮಾತು

ನವದೆಹಲಿ(ಮೇ 10) ಕೊರೋನಾದ ಆತಂಕದ ಸಮಯದಲ್ಲಿ ನಕಾರಾತ್ಮಕ ಅಂಶದಿಂದ ಸಕಾರಾತ್ಮಕ ಅಂಶದ ಕಡೆ ಬರಲೇಬೇಕಿದೆ. ಪಾಸಿಟಿವ್ ಆಗುವ ಬದಲು ಪಾಸಿಟಿವ್ ಚಿಂತನೆಗಳು ಬೇಕಾಗಿದೆ. ಧಾರ್ಮಿಕ ಸಂಸ್ಥೆಗಳು, ಉದ್ಯಮಿಗಳು, ಫಿಲೋಸಾಫರ್‌ಗಳು, ಮಾಧ್ಯಮಗಳು ಆ ಕೆಲಸವನ್ನು ಆರಂಭಿಸಿವೆ.ಕೊರೋನಾ ಸಂಕಷ್ಟದ ಸಂದರ್ಭದಿಂದ ಹೇಗೆ ಹೊರಗೆ ಬರಬೇಕು? ನಮ್ಮನ್ನು ಖಿನ್ನತೆ ಆವರಿಸಿಕೊಳ್ಳುವುದರಿಂದ ಹೇಗೆ ಹೊರಗೆ ಇರಬೇಕು ಎಂಬ ವಿಚಾರದ ಕುರಿತು ಬುಧವಾರ ಸಂಜೆ 4.30ಕ್ಕೆ ಜೈನ ಮುನಿ ಶ್ರೀ ಪ್ರಮನ್‌ಸಾಗರ್ ಜಿ ಮಾತನಾಡಲಿದ್ದಾರೆ. ಇದೆ ವಿಚಾರವನ್ನು ಇಟ್ಟುಕೊಂಡು ಸದ್ಗುರು ಜಗ್ಗಿ ವಾಸುದೇವ್‌ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಮೇ 11ರಿಂದ 15ರವರೆಗೆ ವಿವಿಧ ವಿಭಾಗದಲ್ಲಿ ಉಪನ್ಯಾಸ ನೀಡಲಿದ್ದಾರೆ. ಅದಕ್ಕೆ ವೇಳೆಯನ್ನು ನಿಗದಿ ಮಾಡಿಕೊಂಡಿದ್ದಾರೆ. ಯಾರಿಗೆ ಆಕ್ಸಿಜನ್ ಬೆಡ್ ಬೇಕಾಗುತ್ತದೆ?

View full article
43 views10:18
ओपन / कमेंट
2021-05-12 13:18:11
ಕೊಪ್ಪಳ: ಬೆಡ್‌ಗಾಗಿ ಕೊರೋನಾ ರೋಗಿಗಳ ಅರಣ್ಯರೋದನ

ಸೋಮರಡ್ಡಿ ಅಳವಂಡಿ ಕೊಪ್ಪಳ(ಮೇ.12): ನಿತ್ಯವೂ ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಾಗಿ ರೋಗಿಗಳು ಅಲೆಯುತ್ತಿದ್ದಾರೆ. ಆದರೆ, ಎಲ್ಲಿಯೂ ಬೆಡ್‌ ಸಿಗುತ್ತಿಲ್ಲ. ರೋಗಿಗಳ ಕೂಗು ಅರಣ್ಯರೋದನವಾಗುತ್ತಿದೆ. ಬೆಡ್‌ ಸಿಗದೆಯೇ ಅದೆಷ್ಟೋ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೊಪ್ಪಳ ಜಿಲ್ಲೆಯೊಂದರಲ್ಲಿಯೇ ನಿತ್ಯವೂ 500ಕ್ಕೂ ಅಧಿಕ ಕೇಸ್‌ಗಳು ಬರುತ್ತಿವೆ.

View full article
43 views10:18
ओपन / कमेंट
2021-05-12 13:18:08
ಮೇ 16ರಂದು ರಾಜ್ಯದಲ್ಲಿ ಮಹಾ ಮಳೆ, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು, ಮೇ 12: ರಾಜ್ಯದಲ್ಲಿ ಮೇ 16 ರಂದು ರಾಜ್ಯದಲ್ಲಿ ಭಾರಿ ಮಳೆ ಸುರಿಯಲಿದ್ದು, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚು ಮಳೆ ಸುರಿಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಮೇ 16ರಂದು ಚಂಡಮಾರುತ ಬಂದು ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಕರ್ನಾಟಕ, ಗೋವಾ, ಮಹಾರಾಷ್ಟ್ರ, ಕೇರಳದಲ್ಲಿ ಮಳೆಯಾಗಲಿದೆ. ಮೇ 15ರವರೆಗೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಇನ್ನುಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ತುಮಕೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ.

View full article
46 views10:18
ओपन / कमेंट
2021-05-12 13:18:07
ರಾಜ್ಯಕ್ಕೆ ಇನ್ನೂ 4 ಕಂಟೇನರ್‌ ಆಮ್ಲಜನಕ ಸಿಗಲಿದೆ: ಶೆಟ್ಟರ್

ಬೆಂಗಳೂರು ಮೇ 12: ರಾಜ್ಯಕ್ಕೆ ಆಗಮಿಸಿರುವ 6 ಕಂಟೇನರ್‌ ಆಮ್ಲಜನಕವನ್ನು ನೀಡಿದ ಕೇಂದ್ರ ಸರಕಾರಕ್ಕೆ ಆಭಿನಂದನೆ ಸಲ್ಲಿಸಿದ ಸಚಿವರು, ಮುಂದಿನ ದಿನಗಳಲ್ಲಿ ಇನ್ನೂ 4 ಕಂಟೇನರ್‌ ಆಮ್ಲಜನಕ ಸರಬರಾಜು ಆಗಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ಎಂದರು. ರಾಜ್ಯದ ಜಿಲ್ಲೆಗಳಲ್ಲಿ ಆಮ್ಲಜನಕದ ಬೇಡಿಕೆಯ ಅನುಗುಣವಾಗಿ ಅದನ್ನು ಪೂರೈಸುವುದರ ಮೇಲೆ ಹೆಚ್ಚಿನ ಗಮನ ನೀಡುವ ಮೂಲಕ ಸಮರ್ಪಕ ಸರಬರಾಜು ಆಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವ ಶೆಟ್ಟರ್ ಸೂಚನೆ ನೀಡಿದರು. ಎಚ್‍ಎಫ್‍ಎನ್‌ಒ ಬದಲು ವೆಂಟಿಲೇಟರ್ ಅಳವಡಿಕೆ; ಸುಧಾಕರ್ ಅಲ್ಲದೆ, ಇಂದು ರಾಜ್ಯಕ್ಕೆ ಆಗಮಿಸಿರುವ 6 ಕಂಟೇನರ್‌ ಆಮ್ಲಜನಕವನ್ನು ನೀಡಿದ ಕೇಂದ್ರ ಸರಕಾರಕ್ಕೆ ಆಭಿನಂದನೆ ಸಲ್ಲಿಸಿದ ಸಚಿವರು, ಮುಂದಿನ ದಿನಗಳಲ್ಲಿ ಇನ್ನೂ 4 ಕಂಟೇನರ್‌ ಆಮ್ಲಜನಕ ಸರಬರಾಜು ಆಗಲಿದೆ ಎಂದು ಹೇಳಿದರು.

View full article
46 views10:18
ओपन / कमेंट
2021-05-12 13:18:05
ಲಾಕ್‌ಡೌನ್ ಎಫೆಕ್ಟ್: ರೈತರು, ತರಕಾರಿ ವ್ಯಾಪಾರಿಗಳ ಬದುಕು ಬೀದಿಗೆ..

ದಾವಣಗೆರೆ, ಮೇ 12: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಯಾಗಿದ್ದು, ಇದೇ ವೇಳೆ ತರಕಾರಿ ಬೆಳೆದಿದ್ದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಪ್ರತಿನಿತ್ಯ ಮಾರುಕಟ್ಟೆಗೆ ತರಕಾರಿ ತೆಗೆದುಕೊಂಡು ಬಂದರೂ ದರ ಸಿಗದೆ ಕಂಗಾಲಾಗಿದ್ದಾರೆ. ಎಲ್ಲಾ ತರಕಾರಿ ಖರೀದಿಯಾಗುವುದಿಲ್ಲ ಎಂಬ ಕಾರಣಕ್ಕೆ ವರ್ತಕರು ಉತ್ತಮ ಧಾರಣೆ ನೀಡುತ್ತಿಲ್ಲ. ಇದರಿಂದ ರೈತರು ಬಂದಷ್ಟು ಹಣ ಪಡೆದು ವಾಪಸ್ ಹೋಗುತ್ತಿದ್ದಾರೆ. ಲಾಕ್‌ಡೌನ್ ಎಫೆಕ್ಟ್: ದ.ಕ ಜಿಲ್ಲೆಯಲ್ಲಿ ನೆಲಕಚ್ಚಿದ ತರಕಾರಿ, ಮೀನುಗಾರಿಕಾ ಉದ್ಯಮ ದಾವಣಗೆರೆ ಜಿಲ್ಲೆಯಲ್ಲಿ ಮೆಣಸಿನಕಾಯಿ, ಈರುಳ್ಳಿ, ಟೊಮೆಟೊ ಸೇರಿದಂತೆ ಇತರೆ ಬೆಳೆ ಬೆಳೆಯುತ್ತಾರೆ.

View full article
48 views10:18
ओपन / कमेंट
2021-05-12 10:18:05
ಮಾನವೀಯತೆಯನ್ನೇ ಮರೆತ ಜನ: ಸೋಂಕಿತ ತಂದೆ-ತಾಯಿಯೊಂದಿಗೆ ಮಗು..!

ಕೂಡ್ಲಿಗಿ(ಮೇ.12): ಸೋಂಕಿತ ತಂದೆ-ತಾಯಿಯ ಜತೆ 5 ವರ್ಷದ ಮಗು ಜೀವನ ನಡೆಸುತ್ತಿದೆ. ಆಸರೆಯಾಗಬೇಕಿದ್ದ ನೆರೆಹೊರೆಯವರು ಸಹ ಬಾಗಿಲು ಮುಚ್ಚಿಕೊಂಡಿದ್ದು, ಸೋಂಕಿತ ತಾಯಿಯೇ ಮಗುವಿಗೆ ಅಡುಗೆ ಮಾಡಿ ನೀಡುತ್ತಿದ್ದಾರೆ. ಇದರಿಂದ ಮಗುವಿಗೆ ಸೋಂಕು ತಗುಲುವ ಆತಂಕ ಶುರುವಾಗಿದೆ. ತಾಲೂಕಿನ ಶ್ರೀಕಂಠಾಪುರ ತಾಂಡಾದ ಗಂಗಾಧರ (32), ಪತ್ನಿ ಸಾವಿತ್ರಿಬಾಯಿಗೆ (30) ಇಬ್ಬರಿಗೂ ಕೊರೋನಾ ಸೋಂಕು ತಗುಲಿದ್ದು, ಹೋಂ ಐಸೋಲೇಷನ್‌ನಲ್ಲಿ ಇದ್ದಾರೆ.

View full article
20 views07:18
ओपन / कमेंट