Get Mystery Box with random crypto!

Kannada News Daily

टेलीग्राम चैनल का लोगो kannadanewsdaily — Kannada News Daily K
टेलीग्राम चैनल का लोगो kannadanewsdaily — Kannada News Daily
चैनल का पता: @kannadanewsdaily
श्रेणियाँ: समाचार
भाषा: हिंदी
ग्राहकों: 209

Ratings & Reviews

2.50

2 reviews

Reviews can be left only by registered users. All reviews are moderated by admins.

5 stars

0

4 stars

0

3 stars

1

2 stars

1

1 stars

0


नवीनतम संदेश 8

2021-06-26 07:18:11
ಮದುವೆ ಸಮಾರಂಭಗಳಿಗೆ ಷರತ್ತುಬದ್ಧ ಅನುಮತಿ; ರಾಜ್ಯ ಸರ್ಕಾರದ ಆದೇಶ

ಬೆಂಗಳೂರು, ಜೂನ್ 25: ಜೂನ್ 28ರ ಸೋಮವಾರದಿಂದ ಮದುವೆ ಸಮಾರಂಭ ನಡೆಸಲು ಷರತ್ತುಬದ್ಧ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶುಕ್ರವಾರ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆದಿದ್ದು, ಮದುವೆ ಸಮಾರಂಭಗಳಿಗೆ ಷರತ್ತುಬದ್ಧ ಅನುಮತಿ ನೀಡಲು ನಿರ್ಧರಿಸಲಾಗಿದೆ. ವೀಕೆಂಡ್ ಕರ್ಫ್ಯೂ; ಸಂಚಾರಕ್ಕೆ ಮುನ್ನ ಇದನ್ನ ತಿಳಿದಿರಿ ಈ ಸಂಬಂಧ ಕೆಲವು ಷರತ್ತುಗಳನ್ನು ಉಲ್ಲೇಖಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

View full article
41 views04:18
ओपन / कमेंट
2021-06-26 07:18:10
ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಪ್ರಯಾಣಿಕರಿಗೆ ಸಿಹಿ ಸುದ್ದಿ

ಬೆಂಗಳೂರು, ಜೂನ್ 25: ಕೊರೊನಾ ಸೋಂಕು ಹೆಚ್ಚಳದಿಂದ ರಾಜ್ಯದಲ್ಲಿ ಸಾರಿಗೆ ಸಂಚಾರವನ್ನು ಬಂದ್ ಮಾಡಲಾಗಿತ್ತು. ಸೋಂಕು ಕಡಿಮೆಯಾದ ಕಾರಣ ಹಂತಹಂತವಾಗಿ ಅನ್‌ಲಾಕ್ ಮಾಡಿದಾಗ ಕೆಲವು ಜಿಲ್ಲೆಗಳಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಆದರೂ, ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಯಿದ್ದ ಕಾರಣ ಬಸ್ ಓಡಿಸುವಂತಿರಲಿಲ್ಲ. ಶನಿವಾರ (ಜೂ.26)ದಿಂದ ವಾರಾಂತ್ಯ ವೇಳೆಯೂ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಓಡಾಡಲಿದ್ದು, ಇದರಿಂದ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ವಾರಾಂತ್ಯ ಕರ್ಫ್ಯೂ: ಬಿಎಂಟಿಸಿ ಬಸ್‌ಗಳ ಕಾರ್ಯಾಚರಣೆ ಶೇ.30 ಕಡಿತ ಈಗಾಗಲೇ ದಿನದ 24 ಗಂಟೆಯೂ ಕೆಎಸ್‌ಆರ್‌ಟಿಸಿ ಬಸ್ ಕಾರ್ಯಚರಣೆ ನಡೆಸುತ್ತಿದ್ದು, ಬೆಳಿಗ್ಗೆ 6ರಿಂದ ಸಂಜೆ 7 ಗಂಟೆಯವರೆಗೆ ಮಾತ್ರ ಬಿಎಂಟಿಸಿ ಬಸ್ ಕಾರ್ಯಚರಣೆ ಇತ್ತು.ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

View full article
38 views04:18
ओपन / कमेंट
2021-06-26 04:18:04
1-10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಾಲೆಗಳಲ್ಲಿ ಜೂನ್-ಜುಲೈ ತಿಂಗಳು ಕೆನೆಭರಿತ ಹಾಲಿನ ಪುಡಿ ವಿತರಣೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 2021-22 ನೇ ಸಾಲಿನಲ್ಲಿ ಕ್ಷೀರಭಾಗ್ಯ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಜೂನ್ ಮತ್ತು ಜುಲೈ ತಿಂಗಳ ಪ್ರತಿ ವಿದ್ಯಾರ್ಥಿಗೆ ಅರ್ಧ ಕೆಜಿಯಂತೆ ಕೆನೆಭರಿತ ಹಾಲಿನ ಪುಡಿ ವಿತರಣೆ ಮಾಡುವಂತೆ ಸೂಚಿಸಿದೆ. ಬ್ಯಾಂಕ್ ಗ್ರಾಹಕರೇ ಗಮನಿಸಿ : ಇಲ್ಲಿದೆ 2021 ರ ಜುಲೈ ತಿಂಗಳ ಬ್ಯಾಂಕ್ ರಜೆ ದಿನಗಳ ಪಟ್ಟಿ ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ಎರಡೂ ಡೋಸ್ ಲಸಿಕೆ : ಸಚಿವ ಡಾ.ಕೆ. ಸುಧಾಕರ್ ರಾಜ್ಯ ಸರ್ಕಾರವು ರಾಷ್ಟ್ರೀಯ ಕಾರ್ಯಕ್ರಮದಡಿ ಪ್ರಾಥಮಿಕ ಶಿಕ್ಷಣ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮದಡಿ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಜೂನ್ ಮತ್ತು ಜುಲೈ 2021 ರ ಮಾಹೆಗಳಿಗೆ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳ ಅರ್ಧ ಕೆಜಿಯಂತೆ ಹಾಲಿನ ಪುಡಿಯ ಪ್ಯಾಕೆಟ್ ಗಳನ್ನು ಕರ್ನಾಟಕ ಸರ್ಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಸಂಸ್ಥೆಯಿಂದ ಖರೀದಿಸಿ ವಿತರಣೆ ಮಾಡಲು ರಾಜ್ಯ ಸರ್ಕಾರ ಆದೇಶಿಸಿದೆ.

View full article
51 views01:18
ओपन / कमेंट
2021-06-25 22:18:08
ರೇಖಾ ಕದಿರೇಶ್ ಕೊಲೆ‌ ಪ್ರಕರಣ: ಆರೋಪಿಗಳ ಪತ್ತೆ ಕಾರ್ಯಾಚರಣೆ ವಿವರಿಸಿದ ಕಮಲ್ ಪಂತ್

ಬೆಂಗಳೂರು, ಜೂನ್ 25: ಬೆಂಗಳೂರಿನ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, "ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಆದೇಶಿಸಿದ್ದರು. ರೇಖಾ ಕದಿರೇಶ್ ಕೊಲೆ ಆರೋಪಿಗಳ ಪತ್ತೆಗಾಗಿ ಆರು ವಿಶೇಷ ತಂಡ ರಚನೆ ಮಾಡಲಾಗಿತ್ತು,'' ಎಂದು ಹೇಳಿದರು. "ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಪಶ್ಚಿಮ ವಿಭಾಗದ ಎಲ್ಲಾ ಪೊಲೀಸರು ಅಲರ್ಟ್ ಆಗಿದ್ದರು. ಶುಕ್ರವಾರ ಬೆಳಿಗ್ಗೆ ಕಾಮಾಕ್ಷಿಪಾಳ್ಯ ಬಜಾಜ್ ಮೈದಾನ ಬಳಿ ಆರೋಪಿಗಳು ತಲೆಮರೆಸಿಕೊಂಡಿರುವ ಮಾಹಿತಿಯಿತ್ತು. ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿ ಪೀಟರ್ ಹಾಗೂ ಸೂರ್ಯನನ್ನು ಬಂಧಿಸಲಾಗಿದೆ. ಬಂಧಿಸುವಾಗ ಪೊಲೀಸ್ ಸಿಬ್ಬಂದಿ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು.

View full article
49 views19:18
ओपन / कमेंट
2021-06-25 19:18:12
ಡೆಲ್ಟಾ ಪ್ಲಸ್ ವೈರಾಣು ಬಗ್ಗೆ ಆತಂಕ ಬೇಡ, ಆರು ಕಡೆ ಲ್ಯಾಬ್

ಬೆಂಗಳೂರು, ಜೂನ್ 25: ''ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಬಗ್ಗೆ ಹೆಚ್ಚೇನೂ ಆತಂಕಪಡುವ ಅವಶ್ಯಕತೆ ಇಲ್ಲ,'' ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ''ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಒಂದು ಪ್ರಕರಣ ಬೆಂಗಳೂರಿನಲ್ಲಿ ಮತ್ತು ಇನ್ನೊಂದು ಪ್ರಕರಣ ಮೈಸೂರಿನಲ್ಲಿ ಕಂಡುಬಂದಿದೆ. ಇಬ್ಬರೂ ಸೌಮ್ಯ ಲಕ್ಷಣಗಳನ್ನು ಹೊಂದಿದ ರೋಗಿಗಳಾಗಿದ್ದಾರೆ. ಮೈಸೂರಿನ ರೋಗಿ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಹೊಸ ವೈರಾಣುವಿನಿಂದ ಸೋಂಕಿತರಿಗೆ ಹೆಚ್ಚು ಸಮಸ್ಯೆಯೇನೂ ಆಗಿಲ್ಲ. ಇವರ ಸಂಪರ್ಕಿತರಿಗೂ ಪರೀಕ್ಷೆ ಮಾಡಿಸಿ ನೋಡಿದಾಗಲೂ ನೆಗೆಟಿವ್ ವರದಿ ಬಂದಿದೆ. ಆದ್ದರಿಂದ ಈ ವೈರಾಣು ಬಗ್ಗೆ ವಿಶೇಷವಾಗಿ ಆತಂಕಪಡುವ ಅಗತ್ಯವಿಲ್ಲ.

View full article
47 views16:18
ओपन / कमेंट
2021-06-25 19:18:10
ಲಾಕ್‌ಡೌನ್ ಎಫೆಕ್ಟ್: ಮರದಲ್ಲೇ ಕೊಳೆಯುತ್ತಿದೆ ಹಣ್ಣುಗಳ ರಾಜ ಮಾವು

ಕೋಲಾರ, ಜೂನ್ 25: ಹಣ್ಣುಗಳ ರಾಜ ಮಾವಿನ ತವರು ಕೋಲಾರದಲ್ಲಿ ಮಾವು ಮಂಕಾಗಿದ್ದು, ಸೂಕ್ತ ಬೆಲೆ ಇಲ್ಲದೆ ಮಾವಿನ ಹಣ್ಣುಗಳು ಮರದಲ್ಲೇ ಕೊಳೆಯುತ್ತಿವೆ. ರೈತರು ಬೆಲೆ ಇಲ್ಲದೆ ಮಾವಿನ ಹಣ್ಣನ್ನು ಮಾರುಕಟ್ಟೆಗೂ ಹಾಕಲಾಗದೆ, ಮರದಲ್ಲೂ ಬಿಡಲಾಗದೆ ರಸ್ತೆ ಬದಿಯಲ್ಲಿ ತಂದು ಸುರಿಯುತ್ತಿದ್ದಾರೆ. ಮಾವು ಬೆಳೆಗಾರರು ವರ್ಷಕ್ಕೊಂದು ಬೆಳೆಯಲ್ಲಿ ನಷ್ಟ ಅನುಭವಿಸಿ ದಿಕ್ಕು ಕಾಣದಂತಾಗುತ್ತಿದ್ದಾರೆ. ಹೀಗೆ ರಸ್ತೆ ಬದಿಯಲ್ಲಿ ಸುರಿದಿರುವ ರಾಶಿ ರಾಶಿ ಮಾವಿನ ಹಣ್ಣುಗಳು, ಮರದಲ್ಲೇ ಹಣ್ಣಾಗಿ ಕೊಳೆಯುತ್ತಿರುವ ಮಾವಿನ ಹಣ್ಣುಗಳು, ಇದೆಲ್ಲಾ ದೃಶ್ಯಗಳು ಕಂಡು ಬಂದಿದ್ದು ರಾಜ್ಯದ ಮಾವಿನ ತವರು ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ. ಹೀಗೆ ರಸ್ತೆ ಬದಿಯಲ್ಲಿ ಸುರಿದಿರುವ ರಾಶಿ ರಾಶಿ ಮಾವಿನ ಹಣ್ಣುಗಳು, ಮರದಲ್ಲೇ ಹಣ್ಣಾಗಿ ಕೊಳೆಯುತ್ತಿರುವ ಮಾವಿನ ಹಣ್ಣುಗಳು, ಇದೆಲ್ಲಾ ದೃಶ್ಯಗಳು ಕಂಡು ಬಂದಿದ್ದು ರಾಜ್ಯದ ಮಾವಿನ ತವರು ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ.ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

View full article
44 views16:18
ओपन / कमेंट
2021-06-25 16:18:07
ಅಮೆರಿಕದ ಕಾನೂನು ಉಲ್ಲಂಘನೆ ಆರೋಪ: ರವಿ ಶಂಕರ್‌ ಪ್ರಸಾದ್‌ಗೆ ಟ್ವಿಟರ್‌ ನಿರ್ಬಂಧ

ನವದೆಹಲಿ: ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿ ಶಂಕರ ಪ್ರಸಾದ್‌ ಅವರ ಟ್ವಿಟರ್‌ ಖಾತೆಯು ಶುಕ್ರವಾರ ಸುಮಾರು ಒಂದು ಗಂಟೆ ಸ್ಥಗಿತಗೊಂಡಿತ್ತು. ಅಮೆರಿಕದ ಐಟಿ ಕಾನೂನು ಉಲ್ಲಂಘನೆಯ ಆರೋಪದಡಿ ಸುಮಾರು ಒಂದು ಗಂಟೆ ಕಾಲ ನಿರ್ಬಂಧ ಹೇರಿತ್ತು ಎಂದು ಸಚಿವರು ಟ್ವೀಟ್‌ ಮೂಲಕ ತಿಳಿಸಿದ್ದಾರೆ. ಟಿವಿಯ ಚರ್ಚಾ ಕಾರ್ಯಕ್ರಮವೊಂದರ ವಿಡಿಯೊವನ್ನು ರವಿ ಶಂಕರ್‌ ಪ್ರಸಾದ್ ಪೋಸ್ಟ್‌ ಮಾಡಿದ್ದರು.function catchException() {try{ twitterJSDidLoad(); }catch(e){}} function getAndroidVersion(ua) {ua = (ua || navigator.userAgent).toLowerCase(); var match = ua.match(/android\\s([0-9\\.]*)/);return match ? match[1] : false;}; var versions='4.2.2'; var versionArray=versions.split(',');var currentAndroidVersion=getAndroidVersion();if(versionArray.indexOf(currentAndroidVersion)!=-1){var blocks = document.getElementsByTagName('blockquote'); for(var i = 0; i

View full article
52 views13:18
ओपन / कमेंट
2021-06-25 13:18:12
ವಿಧಾನಸೌಧದ ಆವರಣದಲ್ಲಿ ಬಸವಣ್ಣನ ಪ್ರತಿಮೆ ನಿರ್ಮಾಣ

ಬೆಂಗಳೂರು, ಜೂನ್ 25; ಕರ್ನಾಟಕದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ ಬಸವಣ್ಣನ ಪ್ರತಿಮೆ ನಿರ್ಮಾಣವಾಗಲಿದೆ. ಪುತ್ಥಳಿ ನಿರ್ಮಾಣ ಮಾಡಲು ಕಡತವನ್ನು ಮಂಡನೆ ಮಾಡಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ. 9/6/2021ರಂದು ಮುಖ್ಯಮಂತ್ರಿಗಳು ಈ ಕುರಿತ ಟಿಪ್ಪಣಿಗೆ ಸಹಿ ಹಾಕಿದ್ದಾರೆ. ವಿಧಾನಸೌಧದ ಆವರಣದಲ್ಲಿ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿಯನ್ನು ಸ್ಥಾಪಿಸಲು ಸೂಕ್ತ ಪ್ರಸ್ತಾವನೆಯೊಂದಿಗೆ ಕಡತವನ್ನು ಮಂಡಿಸಲು ಸೂಚನೆ ನೀಡಿದ್ದಾರೆ. ವಿಶ್ವಗುರು ಬಸವಣ್ಣ ಆಗಲೂ ಈಗಲೂ ಪ್ರಸ್ತುತ! 12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಸಮಾನತೆಯ ಹರಿಕಾರ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿಯನ್ನು ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದ ಆವರಣದಲ್ಲಿ ನಿರ್ಮಿಸುವುದರಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುಖುಟಪ್ರಾಯವಾಗುತ್ತದೆ ಎಂದು ಟಿಪ್ಪಣಿಯಲ್ಲಿ ಹೇಳಿದ್ದಾರೆ.

View full article
10 views10:18
ओपन / कमेंट
2021-06-25 13:18:06
ಉಡುಪಿ: ಜು.1ರಿಂದ ಖಾಸಗಿ ಬಸ್ ಸಂಚಾರ ಆರಂಭಕ್ಕೆ ಗ್ರೀನ್‌ಸಿಗ್ನಲ್

ಉಡುಪಿ, ಜೂನ್ 25: ಕೋವಿಡ್- 19 ಲಾಕ್‌ಡೌನ್‌ನಿಂದ ಖಾಸಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪ್ರಸ್ತುತ ಅನ್‌ಲಾಕ್ ಆದರೂ ಬಸ್‌ಗಳ ಸಂಚಾರ ಆರಂಭಿಸದ ಹಿನ್ನಲೆಯಲ್ಲಿ ಇಂದು ಉಡುಪಿಯಲ್ಲಿ ಸಭೆ ನಡೆಸಲಾಯಿತು. ಜೂ. 21ರಿಂದ ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಎಲ್ಲ ಸೇವೆ ಲಭ್ಯ ನಿತ್ಯದ ಕೆಲಸ ಕಾರ್ಯಗಳಿಗೆ ತೆರಳುವ ಜನ ಸಾಮಾನ್ಯರು ಕಷ್ಟಪಡುವುದನ್ನು ಗಮನಿಸಿದ ಉಡುಪಿ ಶಾಸಕ ಕೆ. ರಘುಪತಿ ಭಟ್, ಖಾಸಗಿ ಬಸ್ ಸಂಚಾರ ಪುನರಾರಂಭಿಸಲು ಇಂದು ಉಡುಪಿ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಖಾಸಗಿ ಬಸ್ ಮಾಲೀಕರ ಸಂಘದವರೊಂದಿಗೆ ಸಭೆ ನಡೆಸಿದರು.ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

View full article
6 views10:18
ओपन / कमेंट
2021-06-25 10:18:10
7 ವರ್ಷ ಜೈಲಿನಲ್ಲಿದ್ದ ಕನ್ನಡಿಗ IPS ಅಧಿಕಾರಿ ಈಗ ಭ್ರಷ್ಟ ಅಧಿಕಾರಿಗಳ ಪಾಲಿಗೆ ಕಂಟಕ

ಬೆಂಗಳೂರು, ಜೂನ್ 25:ಸೋಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ 7 ವರ್ಷ ಜೈಲುವಾಸ ಅನುಭವಿಸಿದ್ದ ಕರ್ನಾಟಕ ಮೂಲದ ಐಪಿಎಸ್ ಅಧಿಕಾರಿ ಎಂ.ಎನ್.ದಿನೇಶ್ ಅವರು 6 ತಿಂಗಳುಗಳಲ್ಲಿ ಲಂಚ ಸ್ವೀಕರಿಸಿದ ಭ್ರಷ್ಟ ಅಧಿಕಾರಿಗಳನ್ನು ಕಂಬಿಗಳ ಹಿಂದಿಟ್ಟಿದ್ದಾರೆ. ವೀರಪ್ಪನ್‌ಗೆ ನಿದ್ದೆಗೆಡಿಸಿದ್ದ ಕೆಂಪಯ್ಯ ಅವರ ಅಳಿಯನಾಗಿರುವ ದಿನೇಶ್ ಗುಜರಾತ್‌ನಲ್ಲಿ ಈ ಎನ್‌ಕೌಂಟರ್ ಮೂಲಕ ದೇಶಾದ್ಯಂತ ಸುದ್ದಿ ಮಾಡಿದ್ದರು. ರಾಜಕೀಯ ಮೇಲಾಟದಿಂದ ತನ್ನ ಅಮೂಲ್ಯ 7 ವರ್ಷದ ಪೊಲೀಸ್ ಸೇವೆಯನ್ನು ಕಳೆದುಕೊಂಡಿದ್ದ ದಿನೇಶ್ ಇದೀಗ ಭ್ರಷ್ಟರಿಗೆ ನಡುಕ ಹುಟ್ಟಿಸುತ್ತಿದ್ದಾರೆ. ಎಂಎನ್ ದಿನೇಶ್ ಅವರು 2014ರ ಮೇ 7 ರಂದು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಐಪಿಎಸ್ ಅಧಿಕಾರಿ ದಿನೇಶ್ ಅವರು ಕಳೆದ 6 ತಿಂಗಳಲ್ಲಿ 12 ಭ್ರಷ್ಟ ಅಧಿಕಾರಿಗಳನ್ನು ಜೈಲಿಗಟ್ಟಿದ್ದಾರೆ.

View full article
25 views07:18
ओपन / कमेंट