Get Mystery Box with random crypto!

“ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ”ಗೆ ಸ್ಪೇನ್ ಪ್ರಶಸ್ತಿ “ಇಲ್ಲಿರಲಾರೆ ಅ | 🎯 KPSC Materials 🎯

“ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ”ಗೆ
ಸ್ಪೇನ್ ಪ್ರಶಸ್ತಿ

“ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ” ಕನ್ನಡ ಚಿತ್ರ ಸ್ಪೇನ್ ದೇಶದ ಮ್ಯಾಡ್ರಿಡ್ ನಗರದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲೂ ಪ್ರಶಸ್ತಿಗೆ ಭಾಜನವಾಗಿದೆ.

ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ ಉಡುಪಿಯ ಬಾಲನಟ ದೃಶಾ ಕೊಡಗು ಅವರಿಗೆ ಶ್ರೇಷ್ಠ ಬಾಲನಟ ಪ್ರಶಸ್ತಿ ದೊರಕಿದೆ.

ಮೊದಲು ರೋಮ್ ನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಶ್ರೇಷ್ಟ ಚಿತ್ರವೆಂದು ವಿಮರ್ಶಕರ ಪ್ರಶಸ್ತಿಗೆ ಭಾಜನವಾಗಿದ್ದರೆ ಕಳೆದ ತಿಂಗಳು ಜರ್ಮನಿಯ ಸ್ಟುಟ್ ಗಾರ್ಟ್ ಚಿತ್ರೋತ್ಸವದಲ್ಲಿ ಶ್ರೇಷ್ಠ ನಿರ್ದೇಶಕ ಪ್ರಶಸ್ತಿ ಗಳಿಸಿತ್ತು. ಇದೀಗ ಪ್ರಶಸ್ತಿ ಪಡೆಯುವ ಸರದಿ ಚಿತ್ರದ ಮುಖ್ಯ ಪಾತ್ರಧಾರಿ ನಟನದ್ದಾಗಿದೆ.

ಈ ಮೂಲಕ ಭಾಗವಹಿಸಿದ ನಾಲ್ಕು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮೂರರಲ್ಲಿ ಪ್ರಶಸ್ತಿ ಪಡೆದ ಹೆಗ್ಗಳಿಕೆ ಈ ಚಿತ್ರದ್ದಾಗಿದೆ.

ಗಿರೀಶ್ ಕಾಸರವಳ್ಳಿ ನಿರ್ದೇಶನದ ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಎಸ್.ವಿ ಶಿವ ಕುಮಾರ್ ಅವರು ತಮ್ಮ ಸಂಗಮ ಫಿಲಂಸ್ ಲಾಂಚನದಲ್ಲಿ ತಯಾರಿಸಿದ್ದಾರೆ

ಇದು ಕಾಸರವಳ್ಳಿಯವರ 15ನೇ ಕಥಾ ಚಿತ್ರ. ಹಾಗೆಯೇ ಯಶಸ್ವಿ ಧಾರಾವಾಹಿಗಳನ್ನು ನಿರ್ಮಿಸುತ್ತಾ ಬಂದಿರುವ ನಿರ್ಮಾಪಕ ಎಸ್.ವಿ ಶಿವಕುಮಾರರ 3ನೇ ಕಥಾ ಚಿತ್ರವೂ ಇದಾಗಿದೆ.