Get Mystery Box with random crypto!

ಸ್ವಾತಂತ್ರ್ಯ ಹೋರಾಟಗಾರ್ತಿ ಜಿ.ಸುಶೀಲಾ ನಿಧನ ಕೇರಳ: ಸ್ವಾತಂತ್ರ್ಯ ಹೋರಾ | 🎯 KPSC Materials 🎯

ಸ್ವಾತಂತ್ರ್ಯ ಹೋರಾಟಗಾರ್ತಿ ಜಿ.ಸುಶೀಲಾ ನಿಧನ

ಕೇರಳ: ಸ್ವಾತಂತ್ರ್ಯ ಹೋರಾಟಗಾರ್ತಿ ಹಾಗೂ ಪ್ರಸಿದ್ಧ ವಡಕ್ಕಾತ್‌ ಮನೆತನದ ಜಿ. ಸುಶೀಲಾ (100) ಅವರು ಜಿಲ್ಲೆಯ ಆನಕ್ಕಾರನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ನಿಧನರಾದರು

ಚೆನ್ನೈನಲ್ಲಿ ವಿದ್ಯಾಭ್ಯಾಸ ಮಾಡುವ ಸಮಯದಲ್ಲಿ, ಕ್ವಿಟ್‌ ಇಂಡಿಯಾ ಚಳವಳಿಯ ಅಂಗವಾಗಿ ನಡೆಯುತ್ತಿದ್ದ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಮೂಲಕ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿದ್ದರು.

ಮಹಾತ್ಮ ಗಾಂಧಿ ಅನುಯಾಯಿಯಾಗಿದ್ದ ಅವರು, ಕಾಂಗ್ರೆಸ್‌ನ ಮಹಿಳಾ ಘಟಕದ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು. ಸ್ವಾತಂತ್ರ್ಯ ನಂತರ ಅವರು ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.